image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 'ಥಗ್ ಲೈಫ್' ಸಿನಿಮಾ ಬಿಡುಗಡೆ ಹಾಗೂ ಪ್ರದರ್ಶನ ತಡೆಯದಂತೆ ಹೈಕೋರ್ಟ್ ಗೆ ಮನವಿ

ರಾಜ್ಯದಲ್ಲಿ 'ಥಗ್ ಲೈಫ್' ಸಿನಿಮಾ ಬಿಡುಗಡೆ ಹಾಗೂ ಪ್ರದರ್ಶನ ತಡೆಯದಂತೆ ಹೈಕೋರ್ಟ್ ಗೆ ಮನವಿ

ಬೆಂಗಳೂರು: ಕನ್ನಡವು ತಮಿಳು ಭಾಷೆಯಿಂದ ಜನ್ಮ ತಾಳಿದ್ದು ಎಂಬುದಾಗಿ ನಟ ಕಮಲ್​ ಹಾಸನ್ ಅವರು​ ವಿವಾದ್ಮಾತಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ತಮ್ಮ 'ಥಗ್ ಲೈಫ್' ಸಿನಿಮಾ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ, ಸಿನಿಮಾ ನಿರ್ಮಾಣ ಸಂಸ್ಥೆಯಾಗಿರುವ ರಾಜ್​ಕಮಲ್ ಫಿಲ್ಮ್ ಇಂಟರ್​​ನ್ಯಾಷನಲ್ ಸಂಸ್ಥೆಯು ಹೈಕೋರ್ಟ್ ಕದ ತಟ್ಟಿದೆ.

ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್​ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಅವರು ಈ ಅರ್ಜಿ ಸಲ್ಲಿಸಿದ್ದಾರೆ. ಇದೇ ಜೂನ್ 5ಕ್ಕೆ ಬಿಡುಗಡೆ ಆಗಲಿರುವ ಥಗ್ ಲೈಫ್ ಸಿನಿಮಾ ಪ್ರದರ್ಶನವನ್ನು ತಡೆಯದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿನಿಮಾ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಇನ್ನಷ್ಟೇ ಸಮಯ ನಿಗದಿಯಾಗಬೇಕಾಗಿದೆ.

Category
ಕರಾವಳಿ ತರಂಗಿಣಿ