ಹೈದರಾಬಾದ್: ಜನಪ್ರಿಯ ತಾರಾ ಜೋಡಿ ಅದಿತಿ ರಾವ್ ಹೈದರಿ ಹಾಗೂ ಸಿದ್ಧಾರ್ಥ್ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಇತ್ತೀಚೆಗೆ ಹಸೆಮಣೆ ಏರಿದ್ದು, ಈಗ ತಮ್ಮ ವೈವಾಹಿಕ ಬಂಧನವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸುಂದರ ಫೋಟೋಗಳೊಂದಿಗೆ ಸಂತೋಷದ ಸುದ್ದಿಯನ್ನು ಅದಿತಿ ಹಂಚಿಕೊಂಡಿದ್ದಾರೆ.