image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅರ್ಜುನ್ ಸರ್ಜಾ ನಿರ್ದೇಶನದ, ಐಶ್ವರ್ಯ ಅರ್ಜುನ್ - ನಿರಂಜನ್ ನಾಯಕ - ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ‘ಸೀತಾ ಪಯಣ’ ಚಿತ್ರ ಫೆಬ್ರವರಿ 14ರಂದು ಬಿಡುಗಡೆ

ಅರ್ಜುನ್ ಸರ್ಜಾ ನಿರ್ದೇಶನದ, ಐಶ್ವರ್ಯ ಅರ್ಜುನ್ - ನಿರಂಜನ್ ನಾಯಕ - ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ‘ಸೀತಾ ಪಯಣ’ ಚಿತ್ರ ಫೆಬ್ರವರಿ 14ರಂದು ಬಿಡುಗಡೆ

ಬಹುಮುಖ ಪ್ರತಿಭೆ, ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದ, ಶ್ರೀ ರಾಮ್ ಫಿಲಂಸ್ ಇಂಟರ್‌ ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾಗೂ ಐಶ್ವರ್ಯ ಅರ್ಜುನ್ - ನಿರಂಜನ್ ನಾಯಕ - ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಸೀತಾ ಪಯಣ" ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.  


ಈಗಾಗಲೇ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಮೂಲಕ ಜನಮನ ಸೆಳೆದಿರುವ ಈ ಚಿತ್ರದ ಕಥೆ-ಚಿತ್ರಕಥೆ- ನಿರ್ಮಾಣ ಮತ್ತು ನಿರ್ದೇಶನ ಅರ್ಜುನ್ ಸರ್ಜಾ ಅವರದು.

ಅನೂಪ್ ರೂಬೆನ್ಸ್ ಸಂಗೀತ ನಿರ್ದೇಶನ, ಜಿ.ಬಾಲಮುರುಗನ್ ಛಾಯಾಗ್ರಹಣ, ಅಯೂಬ್ ಖಾನ್ ಸಂಕಲನ, ಅರ್ಜುನ್ ಸರ್ಜಾ ಸಾಹಸ ನಿರ್ದೇಶನ ಹಾಗೂ ಶ್ರಸ್ತಿ ನೃತ್ಯ ನಿರ್ದೇಶನ ಮಾಡಿರುವ ಈ ಚಿತ್ರದ ತಾರಾಬಳಗದಲ್ಲಿ ಐಶ್ವರ್ಯ ಅರ್ಜುನ್, ನಿರಂಜನ್, ಅರ್ಜುನ್ ಸರ್ಜಾ, ಸತ್ಯರಾಜ್, ಪ್ರಕಾಶ್ ರೈ ಮತ್ತು ಕೋವೈ ಸರಳಾ ಮುಂತಾದವರಿದ್ದಾರೆ.  ಅರ್ಜುನ್ ಅವರ ಸೋದರಳಿಯ ಧ್ರುವ ಸರ್ಜಾ ಕೂಡ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

Category
ಕರಾವಳಿ ತರಂಗಿಣಿ