image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತನುಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ: ಕುತೂಹಲ ಕೆರಳಿಸಿದ ಕ್ರೈಮ್ ಥ್ರಿಲ್ಲರ್

ತನುಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ: ಕುತೂಹಲ ಕೆರಳಿಸಿದ ಕ್ರೈಮ್ ಥ್ರಿಲ್ಲರ್

ಬೆಂಗಳೂರು: ಸಿರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅನಿಲ್ ಪಿ. ಅವರು ನಿರ್ಮಿಸಿರುವ, ವಿ.ಲವ ನಿರ್ದೇಶನದ ಮತ್ತು ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ "ಬಾಸ್" ಚಿತ್ರದ ಫಸ್ಟ್ ಲುಕ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. "ಸತ್ಯಮೇವ ಜಯತೇ" ಎಂಬ ಅಡಿಬರಹದೊಂದಿಗೆ ಸಿದ್ಧವಾಗಿರುವ ಈ ಟೀಸರ್ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಕೆರಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ವೀಕ್ಷಣೆ ಕಾಣುತ್ತಿದೆ.
​ಟೀಸರ್ ಬಿಡುಗಡೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ವಿ.ಲವ, "ಬಾಸ್ ಒಂದು ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರವಾಗಿದ್ದು, ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದೇನೆ. ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಿ, ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಯೋಜನೆಯಿದೆ," ಎಂದು ಮಾಹಿತಿ ನೀಡಿದರು.
​ಚಿತ್ರದ ನಾಯಕ ತನುಷ್ ಶಿವಣ್ಣ ಮಾತನಾಡಿ, "ನನ್ನ ಮೊದಲ ಚಿತ್ರದಿಂದಲೂ ಪ್ರೇಕ್ಷಕರು ನೀಡುತ್ತಿರುವ ಪ್ರೋತ್ಸಾಹಕ್ಕೆ ನಾನು ಋಣಿ. ಈ ಚಿತ್ರದಲ್ಲಿ ನಾನು ಸಮಾಜಕ್ಕೆ ಬೇಕಾಗಿರುವ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರದಲ್ಲಿ ಎರಡು ಸುಂದರ ಹಾಡುಗಳಿದ್ದು, ಇಡೀ ತಂಡದ ಪರಿಶ್ರಮದಿಂದ ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ," ಎಂದು ಸಂತಸ ಹಂಚಿಕೊಂಡರು.
​ಈ ಚಿತ್ರದಲ್ಲಿ ಮೋನಿಕಾ ಗೌಡ ಹಾಗೂ ಪಾಯಲ್ ಚಂಗಪ್ಪ ನಾಯಕಿಯರಾಗಿ ನಟಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಡೆವಿ ಸುರೇಶ್ ಅವರ ಸಂಗೀತ ನಿರ್ದೇಶನ, ಶರತ್ ಎನ್.ಆರ್. ಪುರ ಅವರ ಛಾಯಾಗ್ರಹಣ ಹಾಗೂ ಮಹೇಶ್ ರೆಡ್ಡಿ ಅವರ ಸಂಕಲನವಿದೆ. ಚಿತ್ರದಲ್ಲಿ ಡಾ|| ವಿಜಯೇಶ್, ವೀರೇನ್ ಕೇಶವ್, ಭೀಷ್ಮ ರಾಮಯ್ಯ, ಲಕ್ಷ್ಮಣ್ ಪೂಜಾರಿ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಸದಸ್ಯರು ಮತ್ತು ತಾಂತ್ರಿಕ ವರ್ಗದವರು ಹಾಜರಿದ್ದು ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.

Category
ಕರಾವಳಿ ತರಂಗಿಣಿ