image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೃಷ್ಣಂ ಪ್ರಣಯ ಸಖಿ ಬಳಿಕ 'ಬೃಂದಾವಿಹಾರಿ'ಯಾದ ಗಣೇಶ್!

ಕೃಷ್ಣಂ ಪ್ರಣಯ ಸಖಿ ಬಳಿಕ 'ಬೃಂದಾವಿಹಾರಿ'ಯಾದ ಗಣೇಶ್!

ಕನ್ನಡ ಚಿತ್ರರಂಗದ 'ಗೋಲ್ಡನ್ ಸ್ಟಾರ್' ಗಣೇಶ್ ಅಭಿಮಾನಿಗಳಿಗೆ ಯುಗಾದಿ ಹಬ್ಬದ ಸಡಗರದ ನಡುವೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಸೂಪರ್ ಹಿಟ್ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಯಶಸ್ಸಿನ ನಂತರ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸರಾಜು ಅವರ ಕ್ರೇಜಿ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ಅದ್ಧೂರಿಯಾಗಿ ಶೀರ್ಷಿಕೆ ಅನಾವರಣ ಮಾಡಲಾಗಿದೆ.

​ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ ಹೆಸರಾದ ಸಮೃದ್ಧಿ ವಿ. ಮಂಜುನಾಥ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ "ಬೃಂದಾವಿಹಾರಿ" ಎಂದು ಹೆಸರಿಡಲಾಗಿದೆ. ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವು ಸಂಪೂರ್ಣ ರೊಮ್ಯಾಂಟಿಕ್ ಜಾನರ್‌ನಲ್ಲಿರಲಿದ್ದು, ಶೀರ್ಷಿಕೆಯು ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 'ಬೃಂದಾವಿಹಾರಿ' ಎಂಬ ಹೆಸರಿಗೆ ಅಭಿಮಾನಿಗಳು ಫಿದಾ ಆಗಿದ್ದು, ಗಣೇಶ್ ಅವರಿಗೆ ಮತ್ತೊಂದು ಬ್ಲಾಕ್ ಬಸ್ಟರ್ ಗ್ಯಾರಂಟಿ ಎಂದು ಭವಿಷ್ಯ ನುಡಿಯುತ್ತಿದ್ದಾರೆ.

​ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಗಣೇಶ್ ಅವರಿಗೆ ಜೋಡಿಯಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ನಟಿಸಿದ್ದಾರೆ. 'ಕೃಷ್ಣಂ ಪ್ರಣಯ ಸಖಿ'ಯ ಹಾಡುಗಳು ಸೃಷ್ಟಿಸಿದ ಸಂಚಲನದ ನಂತರ, ಈ ಚಿತ್ರಕ್ಕೂ ಖ್ಯಾತ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಅವರೇ ಸಂಗೀತ ನೀಡುತ್ತಿರುವುದು ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ನಿರ್ದೇಶಕ ಶ್ರೀನಿವಾಸರಾಜು ಅವರೇ ಕಥೆ ಹಾಗೂ ಚಿತ್ರಕಥೆ ಬರೆದಿದ್ದು, ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಅತಿ ಶೀಘ್ರದಲ್ಲೇ ಚಿತ್ರದ ಹಾಡುಗಳು ಬಿಡುಗಡೆಯಾಗಲಿವೆ.

Category
ಕರಾವಳಿ ತರಂಗಿಣಿ