image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೇ 22 ರಂದು ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' ಭರ್ಜರಿ ಬಿಡುಗಡೆ

ಮೇ 22 ರಂದು ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' ಭರ್ಜರಿ ಬಿಡುಗಡೆ

ಮಂಗಳೂರು: ​ಕರಾವಳಿಯ ಸಂಸ್ಕೃತಿ, ಸ್ನೇಹ ಮತ್ತು ಕ್ರಿಕೆಟ್ ಪ್ರೇಮವನ್ನು ಒಳಗೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' (ಜೊಂಟೊಟ್ಟು ಸಿನ್ಸ್ 1983) ಇದೇ ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಗಲು ಸಿದ್ಧವಾಗಿದ್ದು,  ಪ್ರಜ್ವಲ್ ಫಿಲ್ಮ್ಸ್ ಲಾಂಛನದಲ್ಲಿ ಪ್ರಜ್ವಲ್ ಶೆಟ್ಟಿ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಕೀರ್ತನ್ ಭಂಡಾರಿ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಭಾರಿ ಕುತೂಹಲ ಮೂಡಿಸಿರುವ ಈ ಸಿನಿಮಾ, ತುಳು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆ ಮೂಡಿಸಿದೆ. ರೋಹನ್ ಪಿರೇರಾ ವಾಮಂಜೂರು ಹಾಗೂ ಸಂತೋಷ್ ಲಾಡ್ ಈ ಚಿತ್ರದ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮಂಗಳೂರು, ಸುರತ್ಕಲ್, ಉಡುಪಿ, ಮಣಿಪಾಲ, ಕುಂದಾಪುರ, ಕಾರ್ಕಳ, ಪುತ್ತೂರು ಸೇರಿದಂತೆ ಕರಾವಳಿಯ ವಿವಿಧ ಭಾಗಗಳ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ.

​'ಗಜಾನನ ಕ್ರಿಕೆಟರ್ಸ್' ಕೇವಲ ಕ್ರಿಕೆಟ್ ಕುರಿತ ಸಿನಿಮಾ ಮಾತ್ರವಲ್ಲದೆ, ಇದು ಗ್ರಾಮೀಣ ಬದುಕಿನ ನೆನಪುಗಳು, ಸ್ನೇಹ ಮತ್ತು ಯುವಕರ ಕನಸುಗಳ ಹೋರಾಟವನ್ನು ಮನಮುಟ್ಟುವಂತೆ ಚಿತ್ರಿಸಿದೆ. ಅಂಡರ್ ಆರ್ಮ್ ಕ್ರಿಕೆಟ್ ಹಿನ್ನೆಲೆಯಲ್ಲಿ ಸಾಗುವ ಈ ಚಿತ್ರದಲ್ಲಿ ಹಾಸ್ಯ, ಪ್ರೀತಿ ಹಾಗೂ ಒಂದು ಉತ್ತಮ ಸಾಮಾಜಿಕ ಸಂದೇಶವನ್ನು ಮನರಂಜನಾತ್ಮಕವಾಗಿ ನೀಡಲಾಗಿದೆ. ಕರಾವಳಿಯ ನೈಸರ್ಗಿಕ ಸೌಂದರ್ಯವನ್ನು ಈ ಚಿತ್ರದಲ್ಲಿ ಅದ್ಭುತವಾಗಿ ಸೆರೆಹಿಡಿಯಲಾಗಿದ್ದು, ಮಂಗಳೂರು ಮತ್ತು ಸುತ್ತಮುತ್ತಲಿನ ಸುಂದರ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಈ ಚಿತ್ರದಲ್ಲಿ ನಿರ್ಮಾಪಕ ಪ್ರಜ್ವಲ್ ಶೆಟ್ಟಿ ಅವರೇ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು ಸೇರಿದಂತೆ ತುಳು ಚಿತ್ರರಂಗದ ಪ್ರಸಿದ್ಧ ಕಲಾವಿದರ ದೊಡ್ಡ ತಾರಾಗಣವೇ ಇಲ್ಲಿದೆ. ಚಿತ್ರದ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ರಚಿಸಿದ್ದಾರೆ. ತಾಂತ್ರಿಕವಾಗಿ ಶ್ರೀಕಾಂತ್ ಕುಮಾರ್ ತೋನ್ಸೆ ಸಂಗೀತ ನೀಡಿದ್ದು, ಪ್ರಸಿದ್ಧ ಗಾಯಕರಾದ ವಿಜಯ್ ಪ್ರಕಾಶ್, ಸೃಜನ್ ಕುಮಾರ್ ತೋನ್ಸೆ ಹಾಗೂ ಮೆಘನಾ ಕುಂದಾಪುರ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸನ್ನಿಧಿ ವಿಶ್ವನಾಥ್ ಶೆಟ್ಟಿ ಅವರ ನೃತ್ಯ ನಿರ್ದೇಶನ ಹಾಗೂ ವಿನುತ್ ಕೆ. ಸುವರ್ಣ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Category
ಕರಾವಳಿ ತರಂಗಿಣಿ