image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಟ್ರೇಲರ್‌ನಲ್ಲೇ ಎಲ್ಲರ ಗಮನ ಸೆಳೆದ ಪಿಚ್ಚರ್ ಸಿನಿಮಾ: ಆಗಸ್ಟ್ 7ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಅದ್ದೂರಿ ಬಿಡುಗಡೆ!

ಟ್ರೇಲರ್‌ನಲ್ಲೇ ಎಲ್ಲರ ಗಮನ ಸೆಳೆದ ಪಿಚ್ಚರ್ ಸಿನಿಮಾ: ಆಗಸ್ಟ್ 7ರಂದು ಕನ್ನಡ ಮತ್ತು ತುಳು ಭಾಷೆಗಳಲ್ಲಿ ಅದ್ದೂರಿ ಬಿಡುಗಡೆ!

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ "ಪಿಚ್ಚರ್" ಚಲನಚಿತ್ರವು ಆರಂಭದಿಂದಲೂ ಸಿನಿರಂಗದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ವೀಕ್ಷಕರಿಂದ ನಿರೀಕ್ಷೆಗೂ ಮೀರಿ ಮೆಚ್ಚುಗೆ ಪಡೆದುಕೊಂಡು ಮುನ್ನುಗ್ಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟ್ರೇಲರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಚಿತ್ರವು ಇದೇ ಆಗಸ್ಟ್ 7 ರಂದು ಅದ್ದೂರಿಯಾಗಿ ತೆರೆಕಾಣಲಿದೆ.

ಕೌಟುಂಬಿಕ ಹಾಗೂ ಕಾಮಿಡಿ ಕಥಾಹಂದರವನ್ನು ಹೊಂದಿರುವ ಈ ಚಿತ್ರ ಸಂಪೂರ್ಣ ಮನರಂಜನಾತ್ಮಕವಾಗಿ ಮೂಡಿಬಂದಿದೆ. ಇದು ಸಂದೀಪ್ ಬೆದ್ರ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದ್ದು, ಪ್ರೇಕ್ಷಕರನ್ನು ರಂಜಿಸಲು ಭರ್ಜರಿ ಮನರಂಜನೆಯೊಂದಿಗೆ ಸಜ್ಜಾಗಿದೆ.
ಈ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ - ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ - ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿದೆ. ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದು, ಸ್ಯಾಮುಯೆಲ್ ಅಭಿ ಸಂಗೀತ ನೀಡಿರುವ ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಈ ಚಿತ್ರದ "ಗೋಕುಲದ ರಾಧೆ" ಹಾಡನ್ನು ಹಾಡಿರುವುದು ವಿಶೇಷವಾಗಿದೆ.

ನಿತ್ಯಪ್ರಕಾಶ್ ಬಂಟ್ವಾಳ "ಪಿಚ್ಚರ್" ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಪೂಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ ಮುಂತಾದ ಅನುಭವಿ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

Category
ಕರಾವಳಿ ತರಂಗಿಣಿ