ಮಂಗಳೂರು : ಮಂಗಳೂರಿನ ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಗರಪಂಚಮಿಯ ಪ್ರಯುಕ್ತ ಸುಬ್ರಹ್ಮಣ್ಯ ದೇವರಿಗೆ ಭಕ್ತಿ-ಶ್ರದ್ಧೆಯಿಂದ ವಿಶೇಷ ಅಭಿಷೇಕ ಹಾಗೂ ಮಹಾಪೂಜೆ ನೆರವೇರಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ. ಬಿ. ಜಿ. ಸುವರ್ಣ, ಸದಸ್ಯರಾದ ಪಿ. ಕೆ. ಗೌರವಿ ರಾಜಶೇಖರ್ ಹಾಗೂ ಶ್ರೀ ಗೋಕರ್ಣನಾಥ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಮತ್ತು ಪ್ರಮುಖರು ಭಾಗವಹಿಸಿದ್ದರು. ಪೂಜಾ ಕೈಂಕರ್ಯಗಳ ನಂತರ ಆಗಮಿಸಿದ ಸಹಸ್ರಾರು ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಿದರು.