image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿಲ್ಲಾಮಟ್ಟದ ಕರಾಟೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ, ಖುಷಿ ಕೆ.ಎಮ್. ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕರಾಟೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ, ಖುಷಿ ಕೆ.ಎಮ್. ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಶ್ರೀದೇವಿ ಪುಣಚದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಖುಷಿ ಕೆ.ಎಮ್. ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂತೆಯೇ ಪ್ರಥಮ ಪಿಯುಸಿ ಕಲಾ ವಿಭಾಗದ ಪ್ರೀತೇಶ್, ವಾಣಿಜ್ಯ ವಿಭಾಗದ ಅಭಯ್ ಎಸ್. ರಾವ್ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಯಜ್ಞ ಅವರು ಬೆಳ್ಳಿ ಪದಕಗಳನ್ನು ಪಡೆದುಕೊಂಡಿದ್ದರೆ, ಪ್ರಥಮ ವಾಣಿಜ್ಯ ವಿಭಾಗದ ಅಕ್ಷಯ್ ಬಿ.ಟಿ. ಹಾಗೂ ಸಾನ್ವಿ ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ತರಬೇತಿ ಪಡೆದಿತ್ತು. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ