image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಜಿಲ್ಲಾಮಟ್ಟದ ಗುರುಚಿತ್ತಾರ ಸ್ಪರ್ಧೆ

ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಜಿಲ್ಲಾಮಟ್ಟದ ಗುರುಚಿತ್ತಾರ ಸ್ಪರ್ಧೆ

ಮಂಗಳೂರು: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರೂಜಿ ಅವರ 172ನೇ ಜನ್ಮದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಮಟ್ಟದ ಗುರುಚಿತ್ತಾರ ಸ್ಪರ್ಧೆಯು 2026ರ ಆಗಸ್ಟ್ 23ರ ಆದಿತ್ಯವಾರದಂದು ಬೆಳಿಗ್ಗೆ 9:30 ಗಂಟೆಗೆ ಮಂಗಳೂರಿನ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ಅವರು ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ,

1912ರಲ್ಲಿ ಸ್ಥಾಪನೆಯಾದ ಅಖಿಲ ಭಾರತ ಬಿಲ್ಲವರ ಯೂನಿಯನ್ ಬಿಲ್ಲವ ಸಮಾಜದ ಸಮಗ್ರ ಸಂಘಟನೆ, ಶಿಕ್ಷಣ ಮತ್ತು ಸಂಘಟನೆಯೊಂದಿಗೆ ಸಮಾಜವನ್ನು ಒಟ್ಟುಗೂಡಿಸುವ ನಿರಂತರ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಈ ಬಾರಿಯ ಜಯಂತಿಯ ಅಂಗವಾಗಿ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು. 

ಸ್ಪರ್ಧೆಯು ಸಬ್ ಜೂನಿಯರ್ (5, 6, 7ನೇ ತರಗತಿ), ಜೂನಿಯರ್ (8, 9, 10ನೇ ತರಗತಿ) ಹಾಗೂ ಸೀನಿಯರ್ (ಪಿಯುಸಿ ಮತ್ತು ಡಿಗ್ರಿ) ವಿಭಾಗಗಳಲ್ಲಿ ನಡೆಯಲಿದೆ. ಪ್ರತಿ ವಿಭಾಗದ ವಿಜೇತರಿಗೆ ಕ್ರಮವಾಗಿ ನಗದು ಬಹುಮಾನ ಹಾಗೂ ಸ್ಮರಣಿಕೆಗಳನ್ನು ನೀಡಲಾಗುತ್ತಿದ್ದು, ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರ ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ