ಮಂಗಳೂರು: ಮೂಡುಜೆಪ್ಪು, ಕೆಲರಾಯಿ ನಿವಾಸಿ ಹಾಗೂ ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಧರ್ಮಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸ್ವಾಸ್ಥ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಪರೋಪಕಾರಿ ಸ್ವಭಾವದವರಾಗಿದ್ದ ಅವರು ನೆರೆಹೊರೆಯವರು ಹಾಗೂ ಪರಿಚಿತರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಮೃತರು ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಅವರ ತಾಯಿ. ಅವರು ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ 14 ಮೊಮ್ಮಕ್ಕಳನ್ನು ಅಗಲಿದ್ದಾರೆ.