image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಗಸ್ಟ್ 22ರಂದು ಮಂಗಳೂರಿನಲ್ಲಿ ಪ್ರೊ. ವಿವೇಕ ರೈ 'ಬೆನ್ನಿದ ಪನಿದೊಂಪ' ವಿಚಾರಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ

ಆಗಸ್ಟ್ 22ರಂದು ಮಂಗಳೂರಿನಲ್ಲಿ ಪ್ರೊ. ವಿವೇಕ ರೈ 'ಬೆನ್ನಿದ ಪನಿದೊಂಪ' ವಿಚಾರಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ

ಮಂಗಳೂರು : ಉರ್ವಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ಆಗಸ್ಟ್ 22ರಂದು ಮಧ್ಯಾಹ್ನ 2:30ಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಥಮ ಅಧ್ಯಕ್ಷ ಪ್ರೊ. ಬಿ.ಎ. ವಿವೇಕ ರೈ ಅವರ ತುಳು ಸಾಹಿತ್ಯ ಅವಲೋಕನ 'ಬೆನ್ನಿದ ಪನಿದೊಂಪ' ವಿಚಾರಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಹಿರಿಯ ಸಂಶೋಧಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಪಾದೆಕಲ್ಲು ವಿಷ್ಣು ಭಟ್ ಅವರು ಪ್ರೊ. ವಿವೇಕ ರೈ ಅವರ 'ತುಳುವ ಜಾಲ ಪೊಲಿ' ಮತ್ತು 'ನಾಲಾಯಿಡ್ದ್ ನಾಲೂರುಗು' ಎಂಬ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಲಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರೀಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮೊದಲ ವಿಚಾರಗೋಷ್ಠಿಯಲ್ಲಿ 'ತುಳು ಅಕಾಡೆಮಿ ಅಧ್ಯಕ್ಷರಾಗಿ ವಿವೇಕ ರೈ' ಎಂಬ ವಿಷಯದ ಕುರಿತು ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ ಹಾಗೂ 'ವಿವೇಕ ರೈ ಅವರ ತುಳು ಸಾಹಿತ್ಯ ಸಂಶೋಧನೆ' ವಿಷಯದ ಕುರಿತು ಉಡುಪಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ವಿಚಾರ ಮಂಡನೆ ಮಾಡಲಿದ್ದಾರೆ. ತದನಂತರ ನಡೆಯಲಿರುವ ಎರಡನೇ ಸಂವಾದ ಗೋಷ್ಠಿಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕ ಡಾ. ತುಕರಾಮ ಪೂಜಾರಿ ಮತ್ತು ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರು ಪ್ರೊ. ವಿವೇಕ ರೈ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಸಮಾರೋಪ ಸಮಾರಂಭವು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕಾಸರಗೋಡು ಚಿನ್ನ ಅವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಮತ್ತು ತುಳು ಜಾನಪದ ಸಂಶೋಧಕ ಡಾ. ಪೂವಪ್ಪ ಕಣಿಯೂರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Category
ಕರಾವಳಿ ತರಂಗಿಣಿ