image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡಕ್ಕೆ ಆಗಸ್ಟ್ 25 ರಂದೇ ಈದ್ ಮಿಲಾದ್ ರಜೆಗೆ ಮುಖಂಡರ ಮನವಿ

ದಕ್ಷಿಣ ಕನ್ನಡಕ್ಕೆ ಆಗಸ್ಟ್ 25 ರಂದೇ ಈದ್ ಮಿಲಾದ್ ರಜೆಗೆ ಮುಖಂಡರ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೂರ್ವ ನಿಗದಿತ ಆಗಸ್ಟ್ 26ರ ಈದ್ ಮಿಲಾದ್ ಸರಕಾರಿ ಸಾರ್ವತ್ರಿಕ ರಜೆಯನ್ನು ಬದಲಾಯಿಸಿ, ಆಗಸ್ಟ್ 25 ಮಂಗಳವಾರದಂದೇ ಸಾರ್ವತ್ರಿಕ ರಜೆ ಘೋಷಿಸುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರ ದರ್ಶನದಲ್ಲಿ ವ್ಯತ್ಯಾಸ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 25ರಂದೇ ಮೀಲಾದ್ ಆಚರಿಸಲು ಜಿಲ್ಲೆಯ ಎಲ್ಲಾ ಖಾಝಿಗಳು ನಿರ್ಧರಿಸಿದ್ದಾರೆ. ಮೀಲಾದ್ ದಿನದಂದು ಜಿಲ್ಲೆಯ ಪ್ರತಿಯೊಂದು ಮಸೀದಿ ವ್ಯಾಪ್ತಿಯಲ್ಲಿ ಮೆರವಣಿಗೆ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಆದ್ದರಿಂದ ಆಗಸ್ಟ್ 25 ರಂದೇ ರಜೆ ನೀಡಿದರೆ ಮುಸ್ಲಿಂ ಸಮುದಾಯದವರಿಗೆ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕಿಸ್ಟಾರ್, ಮಂಗಳೂರು ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಯೆನೆಪೋಯ ಅಬ್ದುಲ್ಲ ಕುನ್ಹಿ ಹಾಗೂ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಶರೀಫ್ ಅಧ್ಯಕ್ಷ ಹಾಜಿ ಜಿ. ಹನೀಫ್ ಅವರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳಿಗೆ ಜಂಟಿಯಾಗಿ ಈ ಮನವಿಯನ್ನು ಹಸ್ತಾಂತರಿಸಿದ್ದಾರೆ.

Category
ಕರಾವಳಿ ತರಂಗಿಣಿ