image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೆಎಸ್‍ಸಿಎಎ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಕೆಎಸ್‍ಸಿಎಎ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ನೂತನ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಅವರು ಆಯ್ಕೆಯಾಗಿದ್ದಾರೆ. ತಮ್ಮ ನಾಯಕತ್ವದ ಗುಣಗಳು, ವೃತ್ತಿಪರ ಬದ್ಧತೆ ಮತ್ತು ಪ್ರತಿಯೊಬ್ಬರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಾಮರ್ಥ್ಯದ ಮೂಲಕ ಕರ್ನಾಟಕದ ಚಾರ್ಟರ್ಡ್ ಅಕೌಂಟೆಂಟ್ ಸಮುದಾಯದಲ್ಲಿ ಅರ್ಥಪೂರ್ಣ ಬದಲಾವಣೆ ತರಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ. ತಮಗೆ ಒಲಿದುಬಂದಿರುವ ಈ ಹೊಸ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ನಿರ್ವಹಿಸುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. ಆಯ್ಕೆಯಾದ ಸಿ.ಎ. ಸುನಿಲ್ ಭಂಡಾರಿ ಅವರು ಬೊಳಿಯಾರು ತಾರಿಪಾಡಿ ದಿ. ಕಾಂತಣ್ಣ ಭಂಡಾರಿ ಹಾಗೂ ಪೆಲಪಾಡಿ ವಸಂತಿ ಕೆ. ಭಂಡಾರಿ ದಂಪತಿಯ ಸುಪುತ್ರರಾಗಿದ್ದಾರೆ.

Category
ಕರಾವಳಿ ತರಂಗಿಣಿ