image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಳೆ ಯೂತ್ ರೆಡ್ ಕ್ರಾಸ್ ರಸಪ್ರಶ್ನೆ ಸ್ಪರ್ಧೆ

ನಾಳೆ ಯೂತ್ ರೆಡ್ ಕ್ರಾಸ್ ರಸಪ್ರಶ್ನೆ ಸ್ಪರ್ಧೆ

ಮಂಗಳೂರು :  ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ. ಇದರ ವತಿಯಿಂದ ನಗರದ ವಿ.ವಿ.ಕಾಲೇಜಿನ ಯೂತ್  ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ  ವಿಶ್ವ ಜಿನೀವಾ ಒಪ್ಪಂದ ದಿನಾಚರಣೆ ಅಂಗವಾಗಿ ಅ. 22 ರಂದು  ಬೆಳಗ್ಗೆ 9.30 ರಿಂದ ವಿ.ವಿ.ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ  ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ.

ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ.ಜಯಂತ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.
 ಯೂತ್ ರೆಡ್ ಕ್ರಾಸ್  ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್., ಯೋಜನಾಧಿಕಾರಿ ಡಾ.ಭಾರತಿ ಪಿಲಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ