ಮಂಗಳೂರು: 2026-27ನೇ ಸಾಲಿನಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ (https://sevasindhuservices.karnataka.gov.in/) ಮೂಲಕವೇ ನಿಗದಿತ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಮಂಗಳೂರಿನ ಪಾಂಡೇಶ್ವರ ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.