image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆ.14 ರಿಂದ 16ರ ವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀಮತಿ  ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಅವರು ಮಾತನಾಡಿ, ಸನಾತನ ಧರ್ಮ ಅತ್ಯಂತ ಶೇಷ್ಟವಾದ ಧರ್ಮ. ಈ ಹೆಮ್ಮೆಯ ಜೊತೆಗೆ ನಮ್ಮಜಾತಿಯ ಬಗ್ಗೆಯೂ ಅಭಿಮಾನ ಪಡೋಣ. ಕಳೆದ ಎರಡು ದಶಕಗಳಿಂದ ವಿಭಿನ್ನ ರೀತಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸುತ್ತಿರುವ ಇಲ್ಲಿನ ಗಣೇಶೋತ್ಸವದಲ್ಲಿ ಮಕ್ಕಳು ಹಾಗೂ ಯುವ ಜನಾಂಗ ಹೆಚ್ಚು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಅವರು ಆಶಿಸಿದರು.

ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ಪ್ರತಿಫಲದ ಅಪೇಕ್ಷೆ ಇಲ್ಲದೆ ದುಡಿಯುವ ನೂರಾರು ಕಾರ್ಯಕರ್ತರಿಂದ ಇಲ್ಲಿನ ಗಣೇಶೋತ್ಸವ ಈವರೆಗೆ ಯಶಸ್ಸು ಗಳಿಸಿದ್ದು, ಸಮಸ್ತ ಸಮಾಜದ ಒಗ್ಗಟ್ಟಿಗೆ ಗಣೇಶೋತ್ಸವ ಪ್ರೇರಣೆ ನೀಡಲಿ ಎಂದರು.

ಗಣೇಶೋತ್ಸವದ ಪ್ರಯುಕ್ತ ನಡೆಯುವ ಹೊರೆಕಾಣಿಕೆ, ಅನ್ನಸಂತರ್ಪಣೆ, ಕ್ರೀಡಾಕೂಟ, ಬಂಟ ಕಲಾ ಸಂಗಮ,ಭಜನಾ ತಂಡ, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಸಂಚಾಲಕರಾದ ಅಶ್ವತ್ತಾಮ ಹೆಗ್ಡೆ, ಸಂಭ್ರಮ ಶೆಟ್ಟಿ, ಉಲ್ಲಾಸ್ ಆರ್  ಶೆಟ್ಟಿ ಪೆರ್ಮುದೆ, ಸಂತೋಷ್ ಶೆಟ್ಟಿ ಶೆಡ್ಡೆ,  ಹಾಗೂ ದಿವಾಕರ ಸಾಮಾನಿ ಚೇಳಾರ್ ಗುತ್ತು  ಅವರು ಪೂರಕ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು,  ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ  ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಷ್ಠಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣಪ್ರಸಾದ್ ರೈ, ಡಾ. ಆಶಾ ಜ್ಯೋತಿ ರೈ,  ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಹಾಗೂ 
ವಿವಿಧ ಬಂಟರ ಸಂಘಗಳ ಅಧ್ಯಕ್ಷರುಗಳಾದ ಬಾಳ ಜಗನ್ನಾಥ ಶೆಟ್ಟಿ, ಕೃಷ್ಣಮೂರ್ತಿರೈ ಬಿಜೈ , ರವೀಂದ್ರ ರೈ ಕಲ್ಲಿಮಾರ್ , ರತ್ನಾಕರ ಶೆಟ್ಟಿ ಎಕ್ಕಾರ್, ಸತ್ಯಪ್ರಸಾದ ಶೆಟ್ಟಿ ಜಪ್ಪಿನಮೊಗರು,  ಆನಂದ ಶೆಟ್ಟಿ ಕಾವೂರು,  ನಾಗೇಶ್ ಶೆಟ್ಟಿ ಕಂಕನಾಡಿ,  ಶೇಖರ ಶೆಟ್ಟಿ, ಶೋಭಾ ಹೆಗ್ಡೆ ಮೂಡಬಿದ್ರೆ ಮತ್ತಿತರರು ಉಪಸ್ಥಿತರಿದ್ದರು. 

ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಸ್ವಾಗತಿಸಿದರು. ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸಮಿತಿಯ ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ ವಂದಿಸಿದರು.

Category
ಕರಾವಳಿ ತರಂಗಿಣಿ