ಪುತ್ತೂರು : ವಿವೇಕಾನಂದ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 3ನೇ ಜಿಲ್ಲಾ ಮಟ್ಟದ ವಿವೇಕಾನಂದ ಜೂನಿಯರ್ ಚೆಸ್ ಟೂರ್ನಮೆಂಟ್‌ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಬ್ರಿಜೇಶ್ 3ನೇ ಸ್ಥಾನ, ಪ್ರಥಮ ಕಲಾ ವಿಭಾಗದ ಶ್ರೀದೇವಿ ಭಟ್ 6ನೇ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ರಿಶನ್ ಬಿ 7ನೇ ಸ್ಥಾನ ಹಾಗೂ ಕಿಶನ್ ಬಡಿಕ್ಕಿಲ 8ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಅವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿತ್ತು. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.