ಬೆಂಗಳೂರು: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮವು (KSDC) ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 9:30 ರಿಂದ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್ (ಗೇಟ್ ನಂ. 4) ನಲ್ಲಿ “ವಿದೇಶದಲ್ಲಿ ಅಧ್ಯಯನ-2026” ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಶೈಕ್ಷಣಿಕ ಮೇಳದಲ್ಲಿ 10ಕ್ಕೂ ಹೆಚ್ಚು ದೇಶಗಳ 75ಕ್ಕೂ ಅಧಿಕ ವಿಶ್ವವಿದ್ಯಾನಿಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳಲು ಬಯಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕೋರ್ಸ್‌ಗಳು, ಪ್ರವೇಶ ಪ್ರಕ್ರಿಯೆಗಳು, ವಿದ್ಯಾರ್ಥಿ ವೀಸಾ ಮಾಹಿತಿ ಹಾಗೂ ವಿದ್ಯಾರ್ಥಿವೇತನದ ಕುರಿತು ಒಂದೇ ವೇದಿಕೆಯಡಿ ಸಮಗ್ರ ಮಾರ್ಗದರ್ಶನ ಒದಗಿಸಲಾಗುತ್ತದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5 ರೊಳಗೆ ಅಧಿಕೃತ ವೆಬ್‌ಸೈಟ್ https://studyabroad.ksdckarnataka.com ನಲ್ಲಿ ಉಚಿತವಾಗಿ ನೋಂದಾಯಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29522222 ಅನ್ನು ಸಂಪರ್ಕಿಸಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.