ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಎಜುಕೇಷನ್ ಎಕ್ಸಲೆನ್ಸಿ ಅವಾರ್ಡ್ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ನೆಲೆಸಿರುವ ಬಂಟ ಸಮಾಜದ 2025-26ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ಶೇಕಡಾ 95 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಸ್ವಯಂ ಲಿಖಿತ ಅರ್ಜಿಯ ಜೊತೆ ಆಧಾರ ಕಾರ್ಡಿನ ಪ್ರತಿ ಮತ್ತು ಅಂಕಪಟ್ಟಿಯ ಪ್ರತಿ, ಇತ್ತೀಚಿನ ಭಾವಚಿತ್ರಗಳನ್ನು ದಿನಾಂಕ 10.09.2026ರ ಒಳಗೆ ಬಂಟರ ಯಾನೆ ನಾಡವರ ಮಾತೃಸಂಘದ ಕಛೇರಿ, ಅಮೃತೋತ್ಸವ ಕಟ್ಟಡ, ಒಂದನೇ ಮಹಡಿ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9480015895, 9480400994 ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.