image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ಅ. 29, 30 ರಂದು ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶ

ಧರ್ಮಸ್ಥಳದಲ್ಲಿ ಅ. 29, 30 ರಂದು ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶ

ಉಜಿರೆ: ಆಪ್ತಾಸ್ ಆಯುರ್ವೇದ ಟ್ರಸ್ಟ್‌ನ ದಶಮಾನೋತ್ಸವದ ಅಂಗವಾಗಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಅಕ್ಟೋಬರ್ 29 ಮತ್ತು 30ರಂದು (ಶನಿವಾರ ಮತ್ತು ಭಾನುವಾರ) ಇಂದ್ರಿಯ ಆರೋಗ್ಯದ ಕುರಿತು “ಪುನರ್ವಸು” ಅಂತಾರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 29ರಂದು ಪೂರ್ವಾಹ್ನ 9:30ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಮಾವೇಶ ಉದ್ಘಾಟಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಯುಷ್ ಸಚಿವಾಲಯದ ಸಲಹೆಗಾರ ಕೌಸ್ತುಭ ಉಪಾಧ್ಯಾಯ, ಮನೀಷಾ ಕೋಟೆಕಾರ್ ಹಾಗೂ ಆಯುಷ್ ಇಲಾಖೆಯ ಆಯುಕ್ತ ಡಾ. ಸುನಿಲ್ ಪನ್ವಾರ್ ಭಾಗವಹಿಸಿ ಶುಭಾಶಂಸನೆ ಮಾಡಲಿದ್ದಾರೆ. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮತ್ತು ಎಸ್.ಡಿ.ಎಂ. ಆಯುರ್ವೇದ ಸಂಸ್ಥೆಗಳ ನಿರ್ದೇಶಕ ಡಾ. ಪ್ರಸನ್ನ ಎನ್. ರಾವ್ ಗೌರವ ಉಪಸ್ಥಿತರಿರಲಿದ್ದಾರೆ.

ಸಮಾವೇಶದ ಸಮಾರೋಪ ಸಮಾರಂಭವು ಅಕ್ಟೋಬರ್ 30ರಂದು ಸಂಜೆ 4 ಗಂಟೆಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಅಕ್ಟೋಬರ್ 29ರಂದು ಸಂಜೆ 7 ಗಂಟೆಗೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಪ್ರದರ್ಶನ ಹಾಗೂ ಅಕ್ಟೋಬರ್ 30ರಂದು ಸಂಜೆ 7 ಗಂಟೆಗೆ ಆಯುರ್ವೇದ ದಿನಚರಿ ಆಧಾರಿತ ಇಂದ್ರಿಯ ಆರೋಗ್ಯ ಅಭ್ಯಾಸಗಳ ಪ್ರಾತ್ಯಕ್ಷಿಕೆ ಜರುಗಲಿದೆ.

Category
ಕರಾವಳಿ ತರಂಗಿಣಿ