ಮಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿʼಸೋಜಾ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವಿಶ್ವವಿದ್ಯಾಲಯದ ಅಧಿನಿಯಮ 1994ರ ಕಲಂ-21(1)(Viii) ರನ್ವಯ 2026ರ ಆಗಸ್ಟ್ 25ರಂದು ಮಾನ್ಯ ಸಭಾಪತಿಯವರು ಈ ನಾಮನಿರ್ದೇಶನ ಮಾಡಿದ್ದು, ಇವರು 2030ರ ಜೂನ್ 17ರ ತನಕ ಸೆನೆಟ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಶ್ರೀ ಐವನ್ ಡಿ’ಸೋಜಾ ಅವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಹಲವು ಹೊಸ ಕೋರ್ಸ್‌ಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖವಾಗಿ ಶ್ರಮಿಸಿದ್ದಾರೆ. ಅಲ್ಲದೆ, ಮಂಗಳೂರು ವಿಶ್ವವಿದ್ಯಾನಿಲಯದ ಚುನಾಯಿತ ಸದಸ್ಯರಾಗಿ, ಸೆನೆಟ್, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಮತ್ತು ವಿವಿಧ ವಿಶ್ವವಿದ್ಯಾನಿಲಯ ಸಮಿತಿಗಳಲ್ಲಿ ಸಂಚಾಲಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾಗಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಇವರ ಅನುಭವವು, ಆರೋಗ್ಯ ಶಿಕ್ಷಣ ಹಾಗೂ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸೆನೆಟ್ ಸದಸ್ಯರಾಗಿ ಮತ್ತಷ್ಟು ಪರಿಣಾಮಕಾರಿಯಾಗಿ ಬಳಕೆಯಾಗುವ ನಿರೀಕ್ಷೆಯಿದೆ.