image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮನ, ಮನೆ ಸ್ವಚ್ಛವಾಗಿದ್ದರೆ ಲಕ್ಷ್ಮಿ ಸ್ಥಿರ: ಶ್ರದ್ಧಾ ಅಮಿತ್

ಮನ, ಮನೆ ಸ್ವಚ್ಛವಾಗಿದ್ದರೆ ಲಕ್ಷ್ಮಿ ಸ್ಥಿರ: ಶ್ರದ್ಧಾ ಅಮಿತ್

ಉಜಿರೆ: ಮನಸ್ಸು ಮತ್ತು ಮನೆ ಪರಿಶುದ್ಧ ಹಾಗೂ ಸ್ವಚ್ಛವಾಗಿದ್ದರೆ ಲಕ್ಷ್ಮಿದೇವಿ ಎಂದಿಗೂ ಚಂಚಲೆಯಾಗುವುದಿಲ್ಲ ಎಂದು ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಹೇಳಿದರು. ಇಲ್ಲಿನ ಕೊಲ್ಲಿ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲಕ್ಷ್ಮಿ ಚಂಚಲೆ ಎಂಬ ನಂಬಿಕೆ ಸಾಮಾನ್ಯವಾಗಿದೆ, ಆದರೆ ಅಷ್ಟಲಕ್ಷ್ಮಿಯರ ಆರಾಧನೆಯಿಂದ ವಿಜಯಲಕ್ಷ್ಮಿ ಒಲಿಯಲು ಸಾಧ್ಯವಾಗುತ್ತದೆ. ಸಂಪತ್ತಿನ ಸರಿಯಾದ ರಕ್ಷಣೆಗೆ ಸಜ್ಜನರ ಸಂಗ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಇ.ಒ. ಅನಿಲ್ ಕುಮಾರ್ ಶುಭಾಶಂಸನೆ ಸಲ್ಲಿಸಿದರು. ಧಾರ್ಮಿಕ ಉಪನ್ಯಾಸ ನೀಡಿದ ಮುಂಡಾಜೆಯ ಅಶ್ವಿನಿ ಅರವಿಂದ ಹೆಬ್ಬಾರ್, ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವುದರಿಂದ ಸಮಾಜದ ಸಂಘಟನೆಯೊಂದಿಗೆ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಗೌರವ ಹೆಚ್ಚಾಗುತ್ತದೆ ಎಂದರು. ಕಾರ್ಯಕ್ರಮವನ್ನು ಜ್ಯೋತಿಲಕ್ಷ್ಮಿ ಸ್ವಾಗತಿಸಿ, ವನಿತಾ ಉಮೇಶ್ ಧನ್ಯವಾದ ಸಮರ್ಪಿಸಿದರು. ಮೀನಾಕ್ಷಿ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Category
ಕರಾವಳಿ ತರಂಗಿಣಿ