image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆಗಸ್ಟ್ 30ರಂದು ‘ಮೊಗೆದಷ್ಟೂ ಮೊಗೆಯುವ ಮೊಳಹಳ್ಳಿ’ ಕೃತಿ ಬಿಡುಗಡೆ ಮತ್ತು ಸಂವಾದ

ಮಂಗಳೂರಿನಲ್ಲಿ ಆಗಸ್ಟ್ 30ರಂದು ‘ಮೊಗೆದಷ್ಟೂ ಮೊಗೆಯುವ ಮೊಳಹಳ್ಳಿ’ ಕೃತಿ ಬಿಡುಗಡೆ ಮತ್ತು ಸಂವಾದ

ಮಂಗಳೂರು : ಮಂಗಳೂರಿನ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ (ರಿ.) 'ಸ್ಪಂದನ' ವತಿಯಿಂದ ಕರಾವಳಿಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಜೀವನಾಧಾರಿತ "ಮೊಗೆದಷ್ಟೂ ಮೊಗೆಯುವ ಮೊಳಹಳ್ಳಿ" ಕೃತಿಯ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವು 2026ರ ಆಗಸ್ಟ್ 30ರ ಭಾನುವಾರ ನಡೆಯಲಿದೆ. ಖ್ಯಾತ ಬರಹಗಾರ ಹಾಗೂ ಶಿಕ್ಷಕ ಅರವಿಂದ ಚೊಕ್ಕಾಡಿ ರಚಿಸಿರುವ ಈ ಕೃತಿಯ ಬಿಡುಗಡೆ ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಕೆ. ಶಿವರಾಮ ಕಾರಂತ ಸಭಾಭವನದಲ್ಲಿ ಬೆಳಿಗ್ಗೆ 9.45ಕ್ಕೆ ಆಯೋಜಿತವಾಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೂಟ್ಟು, ಉಡುಪಿಯ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ, ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ರೋಹಿಣಾಕ್ಷ ಶಿರ್ಲಾಲು, ಲೇಖಕ ಅರವಿಂದ ಚೊಕ್ಕಾಡಿ ಹಾಗೂ ಸಂಸ್ಥೆಯ ಅಧ್ಯಕ್ಷ ಎಸ್. ಆರ್. ಹರೀಶ್ ಆಚಾರ್ಯ ಉಪಸ್ಥಿತರಿರಲಿದ್ದಾರೆ.

ಉದ್ಘಾಟನೆಯ ನಂತರ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಲೇಖಕ ಅರವಿಂದ ಚೊಕ್ಕಾಡಿ ಸಮನ್ವಯ ವಹಿಸಲಿದ್ದಾರೆ. ಈ ಗೋಷ್ಟಿಯಲ್ಲಿ ಹಿರಿಯ ಲೆಕ್ಕಪರಿಶೋಧಕ ಸಿ.ಎ. ಚಂದ್ರಕಾಂತ ರಾವ್, ಸಹಕಾರ ಚುನಾವಣಾ ಪ್ರಾಧಿಕಾರದ ಜಂಟಿ ನಿಬಂಧಕ ಬಿ.ಕೆ. ಸಲೀಮ್, ಹಿರಿಯ ಪತ್ರಕರ್ತ ಲಕ್ಷ್ಮೀ ಮಚ್ಚಿನ, ಹಿರಿಯ ಸಹಕಾರಿ ರಾಧಾಕೃಷ್ಣ ಕೋಟೆ ಹಾಗೂ ಎಸ್.ಆರ್. ಹರೀಶ್ ಆಚಾರ್ಯ ಭಾಗವಹಿಸಲಿದ್ದಾರೆ.

Category
ಕರಾವಳಿ ತರಂಗಿಣಿ