image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಪದವಿಪೂರ್ವ ಶಿಕ್ಷಣ ಉಪನಿರ್ದೇಶಕರ ಕಚೇರಿಯ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಅಂಡರ್–19 ಎಸ್.ಜಿ.ಎಫ್.ಐ ಯೋಗಾಸನ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡಗಳು ಅತ್ಯುತ್ತಮ ಸಾಧನೆಗೈದು ಸಮಗ್ರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ತಂಡವು ಸ್ಪರ್ಧೆಯಲ್ಲಿ 7 ಚಿನ್ನ ಹಾಗೂ 1 ಬೆಳ್ಳಿ ಸೇರಿದಂತೆ ಒಟ್ಟು 8 ಪದಕಗಳನ್ನು ಗೆದ್ದುಕೊಂಡಿದ್ದು, ತಂಡದ ಆರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸ್ಪರ್ಧೆಯ ಆರ್ಟಿಸ್ಟಿಕ್ ಪೇರ್ ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಶ್ರೀವತ್ಸರಾಜ್ ಹಾಗೂ ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ಜೆ. ಎಂ. ಮತ್ತು ಅನನ್ಯ ಎಸ್. ಜಿ. ಪ್ರಥಮ ಸ್ಥಾನ ಪಡೆದರು. ರಿದಮಿಕ್ ಪೇರ್ ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಎನ್. ಮತ್ತು ಶ್ರೀವತ್ಸರಾಜ್ ಹಾಗೂ ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ಜೆ. ಎಂ. ಮತ್ತು ಅನನ್ಯ ಎಸ್. ಜಿ. ಪ್ರಥಮ ಸ್ಥಾನ ಗಳಿಸಿದರು. ಆರ್ಟಿಸ್ಟಿಕ್ ಸಿಂಗಲ್ ಬಾಲಕರ ವಿಭಾಗದಲ್ಲಿ ಶಶಿಕುಮಾರ್ ವಿ. ಜಿ. ಪ್ರಥಮ ಹಾಗೂ ಬಾಲಕಿಯರ ವಿಭಾಗದಲ್ಲಿ ಅನನ್ಯ ಎಸ್. ಜಿ. ದ್ವಿತೀಯ ಸ್ಥಾನ ಪಡೆದರು. ಟ್ರೆಡಿಶನಲ್ ವಿಭಾಗದಲ್ಲಿ ಶಶಿಕುಮಾರ್ ವಿ. ಜಿ. ಮತ್ತು ಪೂರ್ವಿಕ ಜೆ. ಎಂ. ಅನುಕ್ರಮವಾಗಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ