image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ

ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ

ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತರ ಗೌರವಾರ್ಥ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಗಳೂರಿನ ಹೃದಯಭಾಗದಲ್ಲಿರುವ ಈ ವೃತ್ತಕ್ಕೆ ನಾರಾಯಣಗುರು ವೃತ್ತ ಎಂದು ಮರುನಾಮಕರಣ ಮಾಡಿ, ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು ಎಂದರು. ಅಲ್ಲದೆ, ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ನಿರ್ಮಿಸಿ, ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಅಸ್ತಿತ್ವಕ್ಕೆ ತರಲಾಗಿತ್ತು ಎಂದು ಸ್ಮರಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಧಿಕಾರಕ್ಕೆ ಬಂದ ನಂತರ ಕಾಟಾಚಾರಕ್ಕೆಂಬಂತೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಪ್ರತಿವರ್ಷ 500 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರವು ಒಂದು ಪೈಸೆಯನ್ನೂ ನೀಡದೆ ಸಮುದಾಯದ ಅಭಿವೃದ್ಧಿಯನ್ನು ಕಡೆಗಣಿಸಿರುವುದು ಅತ್ಯಂತ ಬೇಸರದ ಸಂಗತಿ ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮೂಡಾ ಮಾಜಿ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪ್ರಮುಖರಾದ ಮಹೇಶ್ ಜೋಗಿ, ಅರುಣ್ ಉರ್ವ, ಸುಕೇಶ್, ಕಿರಣ್, ನಿತಿನ್ ಕುಮಾರ್, ನಿಕಟಪೂರ್ವ ಪಾಲಿಕೆ ಸದಸ್ಯರು ಹಾಗೂ ಮತ್ತಿತರ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ