ಮಂಗಳೂರು : ಓಣಂ ಹಬ್ಬದ ಹಿನ್ನೆಲೆಯಲ್ಲಿ ಉಂಟಾಗುವ ಹೆಚ್ಚುವರಿ ಪ್ರಯಾಣಿಕರ ಜನದಟ್ಟಣೆಯನ್ನು ನಿಯಂತ್ರಿಸಲು ದಕ್ಷಿಣ ರೈಲ್ವೆಯು ಮಂಗಳೂರು ಜಂಕ್ಷನ್‌ನಿಂದ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಡುವೆ ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಕಲ್ಪಿಸಿದೆ. ಹಬ್ಬದ ಅವಧಿಯಲ್ಲಿ ಕರ್ನಾಟಕ ಮತ್ತು ಕೇರಳದ ವಿವಿಧ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ.
ರೈಲು ಸಂಖ್ಯೆ 06072 ಮಂಗಳೂರು ಜಂಕ್ಷನ್-ಎಸ್‌ಎಂವಿಟಿ ಬೆಂಗಳೂರು ಏಕಮುಖ ವಿಶೇಷ ಎಕ್ಸ್‌ಪ್ರೆಸ್ ರೈಲು ಶನಿವಾರ ಬೆಳಿಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದೆ. ಈ ರೈಲು ಮಾರ್ಗಮಧ್ಯೆ ಕಾಸರಗೋಡು, ಕಾಞಂಗಾಡ್, ನೀಲೇಶ್ವರ, ಕಣ್ಣೂರು, ತಲಶ್ಶೇರಿ, ವಡಕರ, ಕೋಝಿಕ್ಕೋಡ್, ತಿರೂರು, ಶೋರನೂರು ಜಂಕ್ಷನ್, ಪಾಲಕ್ಕಾಡ್ ಜಂಕ್ಷನ್, ಪೋದನೂರು ಜಂಕ್ಷನ್, ತಿರುಪ್ಪೂರು, ಈರೋಡ್ ಜಂಕ್ಷನ್, ಸೇಲಂ ಜಂಕ್ಷನ್, ಬಂಗಾರಪೇಟೆ ಜಂಕ್ಷನ್ ಹಾಗೂ ಕೃಷ್ಣರಾಜಪುರಂ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ನಿಗದಿತ ವೇಳಾಪಟ್ಟಿಯಂತೆ ಈ ವಿಶೇಷ ರೈಲು ಭಾನುವಾರ ಮುಂಜಾನೆ 4.00 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.