image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಕಪಿತಾನಿಯೊದಲ್ಲಿ ‘ರೋಹನ್ ಸ್ಕ್ವೇರ್ ಬಸ್ ತಂಗುದಾಣ’ ಉದ್ಘಾಟನೆ

ಮಂಗಳೂರಿನ ಕಪಿತಾನಿಯೊದಲ್ಲಿ ‘ರೋಹನ್ ಸ್ಕ್ವೇರ್ ಬಸ್ ತಂಗುದಾಣ’ ಉದ್ಘಾಟನೆ

ಮಂಗಳೂರು : ಮಂಗಳೂರಿನ ಕಪಿತಾನಿಯೊದಲ್ಲಿ ನಗರದ ನಾಗರಿಕ ಮೂಲಸೌಕರ್ಯವನ್ನು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೂತನವಾಗಿ ನಿರ್ಮಿಸಲಾದ ‘ರೋಹನ್ ಸ್ಕ್ವೇರ್ ಬಸ್ ತಂಗುದಾಣ’ವನ್ನು ಉದ್ಘಾಟಿಸಲಾಯಿತು.

ವೀಡಿಯೊಗಾಗಿ ಕ್ಲಿಕ್ ಮಾಡಿ 

ಕರ್ನಾಟಕ ವಿಧಾನಸಭೆಯ ಸದಸ್ಯರಾದ ಶ್ರೀ ಡಿ. ವೇದವ್ಯಾಸ ಕಾಮತ್ ಅವರು ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾಡುವ ಕೆಲಸವೇ ನಿಜವಾದ ಸೇವೆಯಾಗಿದ್ದು, ಸಾರ್ವಜನಿಕರ ದೈನಂದಿನ ಪ್ರಯಾಣಕ್ಕೆ ಅನುಕೂಲವಾಗುವಂತೆ ರೋಹನ್ ಕಾರ್ಪೊರೇಶನ್ ಕೈಗೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ಶ್ರೀ ಸಂದೀಪ್ ಗರೋಡಿ ಮಾತನಾಡಿ, ಮಂಗಳೂರಿನ ಬೆಳವಣಿಗೆಯಲ್ಲಿ ರೋಹನ್ ಕಾರ್ಪೊರೇಶನ್‌ನ ಕೊಡುಗೆ ಗಮನಾರ್ಹವಾಗಿದ್ದು, ತಮ್ಮ ಯೋಜನೆಗಳ ಜೊತೆಗೆ ನಗರದ ಜನಜೀವನಕ್ಕೂ ಉಪಯೋಗವಾಗುವ ಕೆಲಸಗಳಿಗೆ ಆದ್ಯತೆ ನೀಡುತ್ತಿರುವುದು ಅಭಿನಂದನಾರ್ಹ ಎಂದು ತಿಳಿಸಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೆರೊ ಮಾತನಾಡಿ,  ತಮ್ಮ ಸಂಸ್ಥೆಯ ಜವಾಬ್ದಾರಿ ಯೋಜನೆಗಳಿಗಷ್ಟೇ ಸೀಮಿತವಾಗಿರದೆ, ಸಾರ್ವಜನಿಕರ ದೈನಂದಿನ ಬದುಕಿಗೆ ಅನುಕೂಲವಾಗುವಂತಹ ಕಾರ್ಯಗಳ ಮೂಲಕ ನಗರಕ್ಕೆ ಕೊಡುಗೆ ನೀಡುವುದು ಬದ್ಧತೆಯಾಗಿದೆ ಎಂದು ಹೇಳಿದರು.

ಈ ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೆರೊ, ನಿರ್ದೇಶಕರಾದ ಶ್ರೀ ಡಿಯೋನ್ ಮೊಂತೆರೊ, ಕಾರ್ಪೊರೇಟರ್ ಶ್ರೀ ಸಂದೀಪ್ ಗರೋಡಿ, ರೋಹನ್ ಕಾರ್ಪೊರೇಶನ್‌ನ ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಹಾಗೂ ಶ್ರೀ ಜೇಮ್ಸ್ ಸೇರಿದಂತೆ ಇತರ ಗಣ್ಯರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿದರು.

Category
ಕರಾವಳಿ ತರಂಗಿಣಿ