image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ದಸರಾಗೆ ಭರ್ಜರಿ ಸಿದ್ಧತೆಗೆ ಸಚಿವ ಯು.ಟಿ. ಖಾದರ್ ಸೂಚನೆ

ಮಂಗಳೂರು ದಸರಾಗೆ ಭರ್ಜರಿ ಸಿದ್ಧತೆಗೆ ಸಚಿವ ಯು.ಟಿ. ಖಾದರ್ ಸೂಚನೆ

ಮಂಗಳೂರು : ಮುಂಬರುವ ಮಂಗಳೂರು ದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥಿತ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.

ನಗರದ ಕುದ್ರೋಳಿ, ಮಂಗಳಾದೇವಿ ಹಾಗೂ ಉರ್ವಾ ಮಾರಿಯಮ್ಮ ದೇವಾಲಯಗಳ ಪ್ರಮುಖ ರಸ್ತೆ ಮತ್ತು ಜಂಕ್ಷನ್‌ಗಳಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ನಗರದಲ್ಲಿ ಸಂಪೂರ್ಣ ಹಬ್ಬದ ವಾತಾವರಣ ಮೂಡುವಂತೆ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.

ಸಾರ್ವಜನಿಕರು ಮತ್ತು ಪ್ರವಾಸಿಗರ ಸುಗಮ ಸಂಚಾರಕ್ಕಾಗಿ ಕಟ್ಟುನಿಟ್ಟಿನ ಟ್ರಾಫಿಕ್ ನಿರ್ವಹಣೆ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ರಾತ್ರಿ ವೇಳೆ ದೀರ್ಘಾವಧಿ ಸಿಟಿ ಬಸ್ ಸಂಚಾರ ಹಾಗೂ ವಾಣಿಜ್ಯ ಮಳಿಗೆಗಳ ವ್ಯವಹಾರಕ್ಕೆ ಅವಕಾಶ ಕಲ್ಪಿಸಲು ಆಡಳಿತಕ್ಕೆ ಸೂಚಿಸಲಾಗಿದೆ. ಜೊತೆಗೆ ಆರೋಗ್ಯ ಇಲಾಖೆ ವತಿಯಿಂದ 24/7 ತುರ್ತು ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜಾ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ