image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

1 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

1 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಕಟ್ಟೆಪುಣೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿತು. ಈ ಯೋಜನೆಯನ್ನು ₹1 ಕೋಟಿ ರೂಪಾಯಿಗಳ ವಿಶೇಷ ಅನುದಾನದಡಿ ಕೈಗೆತ್ತಿಕೊಳ್ಳಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಕಟ್ಟೆಪುಣೆ ರಸ್ತೆಯ ಭಾಗದಲ್ಲಿ ಪ್ರತೀ ಮಳೆಗಾಲದಲ್ಲೂ ನೆರೆ ಹಾವಳಿಯಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಇಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ಮತ್ತು ಸೇತುವೆ ನಿರ್ಮಿಸಬೇಕು ಎಂಬುದು ಸ್ಥಳೀಯರ ಹಾಗೂ ಬಿಜೆಪಿ ಪ್ರಮುಖರ ಬಹುವರ್ಷಗಳ ಬೇಡಿಕೆಯಾಗಿತ್ತು. ಈ ಹಿಂದೆ ನಿರ್ಮಿಸಿದ್ದ ತಡೆಗೋಡೆಯು ನೀರಿನ ರಭಸ ತಡೆಯಲು ಸಾಕಾಗುತ್ತಿರಲಿಲ್ಲವಾದ್ದರಿಂದ ಶಾಶ್ವತ ಪರಿಹಾರಕ್ಕಾಗಿ ಬೃಹತ್ ಮೊತ್ತದ ಯೋಜನೆಯ ಅಗತ್ಯವಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಹೆಚ್ಚಿನ ಅನುದಾನ ನೀಡದೆ ಕೇವಲ 25 ಕೋಟಿ ರೂ. ನೀಡಿದ್ದರೂ, ಈ ಭಾಗದ ಗಂಭೀರ ಸಮಸ್ಯೆಯನ್ನು ಪರಿಗಣಿಸಿ ಲೋಕೋಪಯೋಗಿ ಇಲಾಖೆಯಿಂದ 1 ಕೋಟಿ ರೂ. ಕಾಮಗಾರಿಯನ್ನು ಮಂಜೂರು ಮಾಡಲಾಗಿದೆ ಎಂದರು. ಅಲ್ಲದೆ, ತಮ್ಮ ಮೇಲೆ ವಿಶ್ವಾಸವಿಟ್ಟು ಸಹಕರಿಸಿದ ಸ್ಥಳೀಯ ನಾಗರಿಕರಿಗೆ ಶಾಸಕರು ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ವೀಣಾಮಂಗಳ, ಪ್ರಮುಖರಾದ ಲಲ್ಲೇಶ್, ಕೀರ್ತೇಶ್, ರಾಮ್ ಪ್ರಸಾದ್, ಸುಜಾತ, ಪ್ರಾಣೇಶ್, ಸುರೇಂದ್ರ, ಮಧು ಕುಮಾರ್, ಸುಮತಿ, ನಾಗೇಶ್, ಸೋಹನ್, ಮೋಹನ್ ದಾಸ್ ಅಡ್ಯಂತಾಯ, ಪುಷ್ಪರಾಜ್, ಮನೋಹರ್, ಮನೋಜ್ ಪೂಜಾರಿ ಮತ್ತು ರಾಜೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ