image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನ್ಯೂ ಮಂಗಳೂರು ಬಂದರಿಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ: ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಪರಿಶೀಲನೆ

ನ್ಯೂ ಮಂಗಳೂರು ಬಂದರಿಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ: ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಪರಿಶೀಲನೆ

ಮಂಗಳೂರು : ಕರ್ನಾಟಕ ಸರ್ಕಾರದ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ. ಜೆ. ಜಾರ್ಜ್ ಅವರು ಇಂದು ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ (NMPA) ಭೇಟಿ ನೀಡಿ, ಬಂದರಿನ ವಿವಿಧ ಕಾರ್ಯಾಚರಣೆ, ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಪರಿಶೀಲನೆ ನಡೆಸಿದರು.

ಬಂದರಿಗೆ ಆಗಮಿಸಿದ ಸಚಿವರನ್ನು ನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಎಸ್. ಶಾಂತಿ ಹಾಗೂ ಹಿರಿಯ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಭೇಟಿಯ ವೇಳೆ ಬಂದರಿನ ಕಾರ್ಯಾಚರಣಾ ಪ್ರದೇಶಗಳನ್ನು ವೀಕ್ಷಿಸಿದ ಸಚಿವರು, ಕಾರ್ಯನಿರ್ವಹಣೆ, ಸರಕು ನಿರ್ವಹಣಾ ಕಾರ್ಯಾಚರಣೆಗಳು ಹಾಗೂ ಮೂಲಸೌಕರ್ಯಗಳ ಕುರಿತು ಪ್ರತ್ಯಕ್ಷ ಮಾಹಿತಿ ಪಡೆದುಕೊಂಡರು. ಇದರೊಂದಿಗೆ ಕ್ರೂಸ್ ಟರ್ಮಿನಲ್‌ಗೂ ಭೇಟಿ ನೀಡಿ, ಬಂದರಿನ ಮೂಲಕ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.

ಬಳಿಕ ಬಂದರು ಆಡಳಿತ ಮಂಡಳಿಯೊಂದಿಗೆ ಸಂಕ್ಷಿಪ್ತ ಸಭೆ ನಡೆಸಿದ ಮಾನ್ಯ ಸಚಿವರು, ಬಂದರಿನ ಕಾರ್ಯಾಚರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಾದೇಶಿಕ ಆರ್ಥಿಕತೆ ಮತ್ತು ಪ್ರವಾಸೋದ್ಯಮದ ಬೆಳೆವಣಿಗೆಗೆ ಬಂದರು ನೀಡುತ್ತಿರುವ ಕೊಡುಗೆಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮಪ್ರಸಾದ್ ಮನೋಹರ್ (IAS), ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. (IAS), ವಿಧಾನ ಪರಿಷತ್ ಸದಸ್ಯ ಇವಾನ್ ಡಿಸೋಜಾ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್, ಮಾಜಿ ಶಾಸಕ ಜೆ. ಆರ್. ಲೋಬೋ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ