image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೂಡಾ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮೂಡಾ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವ ನಾಯಕ ಸಂತೋಷ್ ಕುಮಾರ್ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮೂಡಾ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

ಸಂತೋಷ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಅವಧಿಯಿಂದ ಪಕ್ಷನಿಷ್ಠೆಯಿಂದ ಕಾರ್ಯನಿರ್ವಹಿಸಿಕೊಂಡು ಬಂದಿದ್ದಾರೆ. ಪಕ್ಷಕ್ಕಾಗಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು ಅವರಿಗೆ ಈ ಉನ್ನತ ಹಾಗೂ ಜವಾಬ್ದಾರಿಯುತ ಹುದ್ದೆಯನ್ನು ನೀಡಿದೆ. ಸಂತೋಷ್ ಶೆಟ್ಟಿ ಅವರು ಮೂಡಾ ಅಧ್ಯಕ್ಷರಾಗಿ ಮಂಗಳೂರು ನಗರದ ಹಾಗೂ ಸುತ್ತಮುತ್ತಲ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಿ ಮತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿ ಎಂದು ಐಕಳ ಹರೀಶ್ ಶೆಟ್ಟಿ ಈ ಸಂದರ್ಭದಲ್ಲಿ ಶುಭ ಹಾರೈಸಿದರು.

Category
ಕರಾವಳಿ ತರಂಗಿಣಿ