image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಾನಿಧ್ಯ ವಿಶೇಷಚೇತನ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಜರುಗಿದ ಶಿಕ್ಷಕರ ದಿನಾಚರಣೆ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭಾಗಿ

ಸಾನಿಧ್ಯ ವಿಶೇಷಚೇತನ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಜರುಗಿದ ಶಿಕ್ಷಕರ ದಿನಾಚರಣೆ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭಾಗಿ

ಮಂಗಳೂರು: ಮಂಗಳೂರಿನ ಶಕ್ತಿನಗರದ ವಿಶೇಷಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ವಸತಿ ಶಾಲೆ ಮತ್ತು ತರಬೇತಿ ಕೇಂದ್ರವಾದ "ಸಾನಿಧ್ಯ" ವತಿಯಿಂದ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿದ ಅವರು, ಸಮಾಜ ನಿರ್ಮಾಣದಲ್ಲಿ ಮತ್ತು ವಿಶೇಷಚೇತನ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವುದರಲ್ಲಿ ಶಿಕ್ಷಕರ ಮಹತ್ವದ ಪಾತ್ರವನ್ನು ಸ್ಮರಿಸಿದರು.

ಈ ವಿಶೇಷ ಸಂದರ್ಭದಲ್ಲಿ ಸನ್ಮಾನ್ಯ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಾನಿಧ್ಯ ಸಂಸ್ಥೆಯ ವಸಂತ್ ಕುಮಾರ್ ಶೆಟ್ಟಿ, ಮಹಾಬಲ ಮಾರ್ಲ, ಜಗದೀಶ್ ಶೆಟ್ಟಿ ಹಾಗೂ ಮತ್ತಿತರ ಗೌರವಾನ್ವಿತ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

Category
ಕರಾವಳಿ ತರಂಗಿಣಿ