ಮಂಗಳೂರು: ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದ, ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದು, ಇಂದು ಬೆಳಿಗ್ಗೆ ಹೃದಯಾಘಾತ ಆದಾಗ ಜತೆಯಲ್ಲಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.67 ವರ್ಷ ವಯಸ್ಸಿನ ಜಯರಾಮ ಆಚಾರ್ಯರಿಗೆ ಹಲವಾರು ಅಭಿಮಾನಿಗಳಿದ್ದಾರೆ.