image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಆಗ್ರಹಿಸಿ 10 ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಶರಣ್ ಪಂಪ್‌ವೆಲ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಆಗ್ರಹಿಸಿ 10 ಲಕ್ಷ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ: ಶರಣ್ ಪಂಪ್‌ವೆಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧಿಸಬೇಕು ಮತ್ತು ಗೋಮಾತೆಯನ್ನು ರಾಷ್ಟ್ರೀಯ ಮಾತೆಯಾಗಿ ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ ಜಿಲ್ಲೆಯಲ್ಲಿ 10 ಲಕ್ಷ ಸಹಿ ಸಂಗ್ರಹಿಸುವ ಮೂರನೇ ಹಂತದ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ. 

ವಿಶ್ವಹಿಂದೂ ಪರಿಷದ್ ಕಾರ್ಯಾಲಯ ವಿಶ್ವಶ್ರೀ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು,  ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಹಾಗೂ ಶ್ರೀರಾಮಚಂದ್ರಾಪುರ ಮಠದ ಭಾರತೀಯ ಗೋ ಪರಿವಾರ ಸೇರಿದಂತೆ ಎಲ್ಲಾ ಹಿಂದೂಪರ ಸಂಘಟನೆಗಳ ಸಹಯೋಗದಲ್ಲಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು. 

ಜಿಲ್ಲೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದ್ದು, ಒಂಬತ್ತು ತಾಲ್ಲೂಕುಗಳಲ್ಲಿ ಸಮಿತಿಗಳನ್ನು ರಚಿಸಿ ಮನೆಮನೆಗೆ ತಲುಪಿಸುವ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಜಿಲ್ಲಾದ್ಯಂತ ಬೃಹತ್ ಪ್ರಮಾಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಪ್ರಮುಖ ದೇವಸ್ಥಾನ-ಮಂದಿರಗಳಲ್ಲಿ ಹಾಗೂ ಮನೆಮನೆಗೆ ತೆರಳಿ ಸಹಿ ಸಂಗ್ರಹ ಮಾಡಲಾಗುವುದು. ಡಿಸೆಂಬರ್ 17 ರಂದು ಮೂರು ಲಕ್ಷಕ್ಕೂ ಹೆಚ್ಚು ಗೋಪ್ರೇಮಿಗಳು ಸಮಾವೇಶ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ಈ ಅಭಿಯಾನದ ಜಿಲ್ಲಾ ಪ್ರಭಾರಿಗಳಾಗಿ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶಿವಾನಂದ ಮಂಡನ್, ಸಹ ಪ್ರಭಾರಿಗಳಾಗಿ ಅಶೋಕ್ ಇಳಂತಿಲ ಮತ್ತು ಶ್ರೀಮತಿ ಶಾಾಂಭವಿ, ಹಾಗೂ ಗೋಸೇವಾ ಗತಿವಿಧಿಯ ರಮೇಶ್ ಭಟ್ ಸರವು ಸಹ ಸಂಯೋಜಕರಾಗಿ ನೇತೃತ್ವ ವಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ದುರ್ಗಾನಂದ ಸ್ವಾಮೀಜಿ, ಎಚ್ ಕೆ ಪುರುಷೋತ್ತಮ್, ಗಜೇಂದ್ರ, ರಮೇಶ್ ಭಟ್, ಗೋಪಾಲ್ ಕುತ್ತಾರ್ ಮತ್ತು ಭರತ್ ಮಂಜನಾಡಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ