ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ, ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್‌ನ ಓಂಕಾರ ನಗರದಲ್ಲಿ ಆಯೋಜಿಸಲಾಗಿರುವ 20 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ.
ಶ್ರೀ ಶರವು ದೇವಸ್ಥಾನದ ಬಳಿಯಿರುವ ಶ್ರೀ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ, ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಶ್ರದ್ಧಾ-ಭಕ್ತಿಗಳಿಂದ ಬಂಟ್ಸ್ ಹಾಸ್ಟೇಲ್‌ನ ಓಂಕಾರ ನಗರಕ್ಕೆ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು.
ಈ ಪವಿತ್ರ ಧಾರ್ಮಿಕ ಕ್ಷಣದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಹಾಗೂ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಪ್ರತಿಷ್ಠಾನದ ಟ್ರಸ್ಟಿಗಳಾದ ಮಂಜುನಾಥ ಭಂಡಾರಿ ಶೆಡ್ಯೆ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೆ. ಬಾಲಕೃಷ್ಣ ಶೆಟ್ಟಿ ಬೆಳ್ಳಿಬೆಟ್ಟುಗುತ್ತು, ಕೃಷ್ಣಪ್ರಸಾದ್ ರೈ ಬೆಳ್ಳಿಪಾಡಿ, ಡಾ. ಆಶಾಜ್ಯೋತಿ ರೈ ಬಂಬ್ರಾಣ, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ ಮಂಗಳೂರು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ, ಸಮಿತಿಯ ಪದಾಧಿಕಾರಿಗಳು ಹಾಗೂ ಸಮನ್ವಯಕಾರರು ಭಾಗವಹಿಸಿದ್ದರು.
ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ವಿವಿಧ ಬಂಟರ ಸಂಘಗಳಿಂದ ಆಗಮಿಸಿದ ಹೊರೆಕಾಣಿಕೆಗಳನ್ನು ಹೊರೆಕಾಣಿಕೆ ಸಮಿತಿಯ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಮತ್ತು ಸಹ ಸಂಚಾಲಕ ಹರೀಶ್ ಶೆಟ್ಟಿ ಬಜಪೆ ಭಕ್ತಿಯಿಂದ ಸ್ವೀಕರಿಸಿದರು.