image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ACCE(I) ಗೌರವ ಫೆಲೋಶಿಪ್

ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ACCE(I) ಗೌರವ ಫೆಲೋಶಿಪ್

ಮಂಗಳೂರು : ಇಂಜಿನಿಯರಿಂಗ್, ಶಿಕ್ಷಣ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ತರ ಕೊಡುಗೆಗಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ‘ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) – ACCE(I)’ ವತಿಯಿಂದ ಪ್ರತಿಷ್ಠಿತ 'ಗೌರವ ಫೆಲೋಶಿಪ್' ಪ್ರದಾನ ಮಾಡಲಾಗುತ್ತಿದೆ.

ಸೆಪ್ಟೆಂಬರ್ 17ರಂದು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಇಂಜಿನಿಯರ್ಸ್ ಡೇ ಆಚರಣೆಯ ಸಂದರ್ಭದಲ್ಲಿ ಈ ಗೌರವವನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬೈರತಿ ಸುರೇಶ್ ಮತ್ತು ಸಂಸದ ಡಾ. ಮಂಜುನಾಥ್ CN ಉಪಸ್ಥಿತರಿರಲಿದ್ದಾರೆ. ಅಲ್ಲದೆ, ದೇಶದ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರಿಗೂ ಸಂಸ್ಥೆಯು ಗೌರವ ಫೆಲೋಶಿಪ್ ಪ್ರದಾನ ಮಾಡುತ್ತಿದೆ ಎಂದು ರಾಜೇಂದ್ರ ಕಲ್ಬಾವಿ (ಅಧ್ಯಕ್ಷರು)ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. 

ಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಮೂಲತಃ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು, ಐಐಟಿ ಬಾಂಬೆಯಿಂದ ಸ್ಟ್ರಕ್ಚರಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಆದಿಚುಂಚನಗಿರಿ ಮಠದ ಮೂಲಕ ಅನೇಕ ಶಿಕ್ಷಣ ಹಾಗೂ ಸಾಮಾಜಿಕ ಸೇವಾ ಸಂಸ್ಥೆಗಳು ಕಾರ್ಯಾಚರಿಸುತ್ತಿದ್ದು, ಸಮಾಜಕ್ಕೆ ನಿರಂತರ ಕೊಡುಗೆ ನೀಡುತ್ತಿವೆ ಎಂದು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಅರುಣ್ ರಾಜ್ (ಮಂಗಳೂರು ಘಟಕದ ಅಧ್ಯಕ್ಷರು), ವಿಜಯ್ ವಿಷ್ಣು ಮಯ್ಯ, ಸುಬ್ರಮಣ್ಯ ಪ್ರಭು, ಚನ್ನಗಿರಿ ಗೌಡ, ಉಜ್ವಲ್ ಡಿಸೋಜ ಮತ್ತು ಭರತ್ ಜೆ. ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ