ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಭಟ್ರಬೆಟ್ಟು ಅಶೋಕ್ ಫ್ರೆಂಡ್ಸ್ ಕ್ಲಬ್ ರಸ್ತೆ ಅಭಿವೃದ್ಧಿ ಕಾಮಗಾರಿಯು 20 ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು, ಹಲವು ಪ್ರಮುಖರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನೆರವೇರಿತು.
ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಅಶೋಕ್ ಫ್ರೆಂಡ್ಸ್ ಕ್ಲಬ್ ಹಾಗೂ ಸ್ಥಳೀಯ ಅನೇಕ ನಿವಾಸಿಗಳ ಬಹುದಿನಗಳ ಬೇಡಿಕೆಯ ಮೇರೆಗೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ಥಳೀಯರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ವಾರ್ಡ್ ಅಧ್ಯಕ್ಷರಾದ ಹರೀಶ್, ಯಶ್ಪಾಲ್, ಸುಕೇಶ್, ಪ್ರವೀಣ್ ನಿಡ್ಡೆಲ್, ಶಶಿರಾಜ್ ಅಂಬಟ್, ವರುಣ್ ಅಂಬಟ್, ಅರ್ಷಾದ್ ಪೋಪಿ, ಚಂದ್ರಶೇಖರ್, ರೇಖಾ, ಭಾರತೀ, ಮಮತಾ, ಅಶ್ವಿನಿ, ಯಶ್ವನಂಥ, ಶೈಲಜಾ, ಜಯರಾಜ್, ಜೆರಾಲ್ಡ್, ಚಿಂತನು, ಕಲಾವತಿ ಮಹಿಳಾ ಮೋರ್ಚಾ ಸದಸ್ಯರು, ವಾರ್ಡಿನ ಕಾರ್ಯಕರ್ತರು, ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.