image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉಮರ್ ಖಾಲಿದ್ 'ದೇಶಭಕ್ತ' ಎಂದ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಶಾಸಕ ಭರತ್ ಶೆಟ್ಟಿ ಆಕ್ರೋಶ

ಉಮರ್ ಖಾಲಿದ್ 'ದೇಶಭಕ್ತ' ಎಂದ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಶಾಸಕ ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ಬೆಂಗಳೂರಿನ ಎನ್‌ಎಲ್‌ಎಸ್‌ಐಯುನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದಾಗ, "ಉಮರ್ ಖಾಲಿದ್ ದೇಶಭಕ್ತ" ಎಂದು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಜೈಲು ಸೇರಿರುವ ಹಾಗೂ ಸುಪ್ರೀಂ ಕೋರ್ಟ್‌ನಿಂದಲೂ ಜಾಮೀನು ಸಿಗದ ವ್ಯಕ್ತಿಯನ್ನು 'ದೇಶಭಕ್ತ' ಎಂದು ಕರೆಯುವುದು ಕಾಂಗ್ರೆಸ್‌ನ ದೇಶವಿರೋಧಿ ಮನಸ್ಥಿತಿ ಮತ್ತು ತುಷ್ಟೀಕರಣ ರಾಜಕಾರಣಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ದೇಶ ಒಡೆಯುವ ಶಕ್ತಿಗಳ ಪರ ನಿಲ್ಲುವ ಮೂಲಕ ಕಾಂಗ್ರೆಸ್ ತನ್ನ 'ತುಕ್ಡೆ-ತುಕ್ಡೆ' ನೀತಿಯನ್ನು ಮತ್ತೊಮ್ಮೆ ಬಟಾಬಯಲು ಮಾಡಿದೆ ಎಂದು ಅವರು ಟೀಕಿಸಿದ್ದಾರೆ.

ದೇಶಭಕ್ತ ಯುವಶಕ್ತಿಯನ್ನು ಅವಮಾನಿಸಿರುವ ಹರಿಪ್ರಸಾದ್ ಅವರು ತಕ್ಷಣವೇ ಕ್ಷಮೆಯಾಚಿಸಬೇಕು ಹಾಗೂ ಬರುವ ದಿನಗಳಲ್ಲಿ ರಾಜ್ಯದ ಜನತೆಯೇ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ