ಮಂಗಳೂರು: ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಬಾರ್ಕೂರು ಮಹಾಸಂಸ್ಥಾನದ ಪೂಜ್ಯ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷ ಭಾರತೀ ಶ್ರೀಗಳು ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿ, ಸಮುದಾಯದ ಕುರಿತು ಸಮಗ್ರ ಮಾಹಿತಿ ನೀಡಿದರು.
ಮನವಿಗೆ ಧನಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು, ಇನ್ನು ಒಂದು ತಿಂಗಳ ಒಳಗೆ ಶ್ರೀಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಿಥುನ್ ರೈ, ತುಂಬೆ ಪ್ರಕಾಶ್ ಶೆಟ್ಟಿ, ಕಾವೂರು ಆನಂದ ಶೆಟ್ಟಿ, ರವೀಂದ್ರ ರೈ ಕಲ್ಲಿಮಾರು, ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ರವೀಂದ್ರ ಶೆಟ್ಟಿ ಉಳಿದೊಟ್ಟು, ಆನಂದ ಶೆಟ್ಟಿ ತೊಕ್ಕೊಟ್ಟು ಹಾಗೂ ಸುರೇಶ್ ಶೆಟ್ಟಿ ಅಂಬ್ಲಮೊಗರು ಸೇರಿದಂತೆ ಬಂಟ ಸಮುದಾಯದ ಹಲವು ಪ್ರಮುಖರು ಉಪಸ್ಥಿತರಿದ್ದರು.