ಮಂಗಳೂರು: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಹಳೆಯ 2G/3G ಮೊಬೈಲ್ ನೆಟ್‌ವರ್ಕ್‌ಗಳನ್ನು ಸ್ವದೇಶಿ 4G ತಂತ್ರಜ್ಞಾನಕ್ಕೆ ಯಶಸ್ವಿಯಾಗಿ ಅಪ್‌ಗ್ರೇಡ್ ಮಾಡಿದೆ. ಭಾರತ ಸರ್ಕಾರದ ಡಿಜಿಟಲ್ ಇಂಡಿಯಾ, ಇ-ಆಡಳಿತ ಮತ್ತು ಗುಣಮಟ್ಟದ ಸಾರ್ವಜನಿಕ ಸಂವಹನ ಸೇವೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಂಗಳೂರು ಟೆಲಿಕಾಂ ಜಿಲ್ಲೆಯ BSNL ಈ ಕ್ರಮ ಕೈಗೊಂಡಿದೆ.
ಪ್ರಸ್ತುತ ಹಳೆಯ 2G ಹಾಗೂ 3G ಸಿಮ್ ಕಾರ್ಡ್‌ಗಳನ್ನು ಬಳಸುತ್ತಿರುವ ಗ್ರಾಹಕರು ಉತ್ತಮ ನೆಟ್‌ವರ್ಕ್ ಸೇವೆ ಪಡೆಯಲು 4G/5G ಸಾಮರ್ಥ್ಯದ ಸಿಮ್‌ಗಳಿಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಸಿಮ್ ಅಪ್‌ಗ್ರೇಡ್ ಪ್ರಕ್ರಿಯೆಯು ಸಂಪೂರ್ಣ ಉಚಿತವಾಗಿದ್ದು, ಗ್ರಾಹಕರು ಯಾವುದೇ ಶುಲ್ಕ ನೀಡುವ ಅಗತ್ಯವಿಲ್ಲ. ಗ್ರಾಹಕರು ತಮ್ಮ ಸಮೀಪದ BSNL ಗ್ರಾಹಕ ಸೇವಾ ಕೇಂದ್ರ (CSC) ಅಥವಾ ಅಧಿಕೃತ BSNL ಸಿಮ್ ರೀಟೇಲರ್‌ಗಳಿಗೆ ಭೇಟಿ ನೀಡಿ ಉಚಿತವಾಗಿ ಸಿಮ್ ಬದಲಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳು ಅಥವಾ ನೆರವಿಗೆ ಗ್ರಾಹಕರು 9446061888, 9440000937, 9446018071 ಅಥವಾ 9480054505 ಸಂಖ್ಯೆಗಳನ್ನು ಸಂಪರ್ಕಿಸಬಹುದು.