image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನ ತಣ್ಣೀರುಬಾವಿಯಲ್ಲಿ ಬೃಹತ್ ಕಡಲತೀರ ಸ್ವಚ್ಛತಾ ಅಭಿಯಾನ

ಮಂಗಳೂರಿನ ತಣ್ಣೀರುಬಾವಿಯಲ್ಲಿ ಬೃಹತ್ ಕಡಲತೀರ ಸ್ವಚ್ಛತಾ ಅಭಿಯಾನ

ಮಂಗಳೂರು: ಅಂತರರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ 2026ರ ಅಂಗವಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾದ 'ಸ್ವಚ್ಛ ಸಾಗರ-ಸುರಕ್ಷಿತ ಸಾಗರ 5.0' ಅಭಿಯಾನದ ಭಾಗವಾಗಿ ನಗರದ ತಣ್ಣೀರುಬಾವಿ ಕಡಲತೀರದ (ಟ್ರೀ ಪಾರ್ಕ್) ಬಳಿ ಬೃಹತ್ ಪ್ರಮಾಣದ ಕಡಲತೀರ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸಹಯೋಗದಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಎನ್.ಎಂ.ಪಿ.ಎ. ಹಿರಿಯ ಸಾಗರ ಇಂಜಿನಿಯರ್ ಅವಿನಾಶ್ ಬಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಿ.ಐ.ಎಸ್.ಎಫ್, ಎನ್.ಎಂ.ಪಿ.ಎ, ಎಂ.ಒ.ಇ.ಎಫ್ ನೋಡಲ್ ಅಧಿಕಾರಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಹಾಗೂ ಉಪ ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಮಂಗಳೂರು ಮಹಾನಗರಪಾಲಿಕೆ, ಆರೋಗ್ಯ ಇಲಾಖೆ, ಸ್ಥಳೀಯ ಪೊಲೀಸ್ ಹಾಗೂ ವಿವಿಧ ಸಂಘಟನೆಗಳು ಈ ಅಭಿಯಾನಕ್ಕೆ ಅಗತ್ಯ ಸಹಕಾರ ನೀಡಿದವು. ಅಭಿಯಾನದಲ್ಲಿ ಯೆನೆಪೋಯ ಡೀಮ್ಡ್ ಟು ಬಿ ಯೂನಿವರ್ಸಿಟಿ, ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿ ಹಾಗೂ ಸ್ವಸ್ತಿಕ್ ನ್ಯಾಷನಲ್ ಬಿಸಿನೆಸ್ ಸ್ಕೂಲ್‍ನ ವಿದ್ಯಾರ್ಥಿಗಳು ಮತ್ತು ಎನ್‍ಎಸ್‍ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ ಕಡಲತೀರವನ್ನು ಸ್ವಚ್ಛಗೊಳಿಸುವಲ್ಲಿ ಶ್ರಮಿಸಿದರು.

Category
ಕರಾವಳಿ ತರಂಗಿಣಿ