image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು 'ಮ್ಯಾಕೋ' ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಂಗಳೂರು 'ಮ್ಯಾಕೋ' ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಮಂಗಳೂರು : ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿಯಮಿತದ (ಮ್ಯಾಕೋ) ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ನಗರದ ಜೆಪ್ಪುವಿನಲ್ಲಿರುವ ಸೆಂಟ್ ಜೋಸೆಫ್ ಸೆಂಟಿನರಿ ಮೆಮೊರಿಯಲ್‌ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಸಂಘದ ಬಲವರ್ಧನೆ, ಸದಸ್ಯರು ಹಾಗೂ ಗ್ರಾಹಕರಿಗೆ ಸೌಲಭ್ಯಗಳ ವಿಸ್ತರಣೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸುವ ಸಾಧ್ಯತೆಗಳ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಂಘವು 50 ವರ್ಷಗಳ ಯಶಸ್ವಿ ಸೇವೆಯನ್ನು ಪೂರೈಸಿದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯಿಂದ ದೊರೆತ ಪುರಸ್ಕಾರದ ಬಗ್ಗೆ ಮಾಹಿತಿ ನೀಡಲಾಯಿತು ಹಾಗೂ ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಭೆಯ ಆರಂಭದಲ್ಲಿ ಕಾರ್ಯದರ್ಶಿ ನಿಶಿತಾ ಅವರು ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಿರಿಲ್ ಡಿಸೋಜಾ, ನಿರ್ದೇಶಕರಾದ ಬಬಿತಾ ಡಿಸೋಜಾ, ವಿದ್ಯಾ ಟೋರಸ್, ಜೇಮ್ಸ್ ಮಾಡ್ತಾ, ಪಿ.ಪಿ. ವರ್ಗೀಸ್, ಅನಿಲ್ ಡಿಸೋಜಾ, ವಸಂತ್ ಶೆಟ್ಟಿ, ರಾಜೇಶ್, ಭಾಸ್ಕರ್ ರಾವ್, ಚಂದ್ರಶೇಖರ್, ಆಲ್ವಿನ್ ಗಾಡ್ವಿನ್ ಪಿಂಟೋ, ಚಂದ್ರಶೇಖರ್ ಕೆ., ಎಡ್ವರ್ಡ್ ಆಲ್ವಿನ್ ಫರ್ನಾಂಡಿಸ್, ಸೌವಾದ್ ಎಂ., ವಿಶ್ವನಾಥ್ ಹಾಗೂ ಜಮಾಲುದ್ದೀನ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ