image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘದಿಂದ ಸಾರ್ವಜನಿಕ ಧನಲಕ್ಷ್ಮಿ ಪೂಜೆ

ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘದಿಂದ ಸಾರ್ವಜನಿಕ ಧನಲಕ್ಷ್ಮಿ ಪೂಜೆ

ಮಂಗಳೂರು: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಸಾರ್ವಜನಿಕ ಧನಲಕ್ಷ್ಮಿ ಪೂಜೆಯನ್ನು ನವೆಂಬರ್ ಮೂರರಂದು ಬಿ ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ ಎಂದು ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷರಾದ ರವೀಂದ್ರ ದಾಸ್ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದಾರ್ಮಿಕ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಜಿ ಮತ್ತು ಶ್ರೀ ಮೊಹನದಾಸ ಪರಮಹಂಸ ಸ್ವಾಮೀಜಿ ಗಳು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ವಹಿಸಲಿದ್ದು, ಅತಿಥಿಗಳಾಗಿ ಸಂಸದರಾದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸುಳ್ಯ ಶಾಸಕರಾದ ಭಾಗೀರತಿ ಮರುಳ್ಯ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್, ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ ಮಂಗಳೂರು ಭಾಗವಹಿಸಲಿದ್ದಾರೆ ಎಂದರು. ಶರಣ್ ಪಂಪ್ ವೆಲ್, ಕ್ಯಾ. ಗಣೇಶ್ ಕಾರ್ಣಿಕ್ ಮುಂತಾದ ಮುಖಂಡರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಯರಾಮ್ ಶೆಟ್ಟಿಗಾರ್, ದಿನೇಶ್ ಅಮ್ಟೂರ್, ಪ್ರಾಣೇಶ್ ರಾವ್, ಧನಂಜಯ್ ಮತ್ತು ಪ್ರಕಾಶ್ ಉಪಸ್ಥಿತರಿದ್ದರು

Category
ಕರಾವಳಿ ತರಂಗಿಣಿ