image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೆ. 27 ರಂದು ಉಜಿರೆಯಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ಶಿಕ್ಷಕರ ದಿನಾಚರಣೆ

ಸೆ. 27 ರಂದು ಉಜಿರೆಯಲ್ಲಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ಶಿಕ್ಷಕರ ದಿನಾಚರಣೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ವಿವಿಧ ಉಪನ್ಯಾಸಕರ ಮತ್ತು ನೌಕರರ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ 'ಶಿಕ್ಷಕರ ದಿನಾಚರಣೆ' ಕಾರ್ಯಕ್ರಮವು ಸೆಪ್ಟೆಂಬರ್ 27ರ ಭಾನುವಾರದಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ 'ಇಂದ್ರಪ್ರಸ್ಥ' ಸಭಾಂಗಣದಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ನವೀನ್ ಶೆಟ್ಟಿ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು. ಟಿ. ಖಾದರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಪುತ್ತೂರು ಶಾಸಕರಾದ ಅಶೋಕ್ ರೈ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಡಿ. ಹರ್ಷೇಂದ್ರ ಕುಮಾರ್ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್. ಹೆಚ್. ಭಾಗವಹಿಸಲಿದ್ದಾರೆ.

ಸಮಾರಂಭದ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಶೇಕಡಾ 100 ರಷ್ಟು ಫಲಿತಾಂಶ ದಾಖಲಿಸಿದ ಪದವಿಪೂರ್ವ ಕಾಲೇಜುಗಳ ಸಿಬ್ಬಂದಿಗೆ ಸನ್ಮಾನ ನೆರವೇರಲಿದೆ. ಜೊತೆಗೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಉಪನ್ಯಾಸಕರಿಂದ ಸಂಗೀತ ರಸಮಂಜರಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಾಗವಹಿಸುವ ಉಪನ್ಯಾಸಕರಿಗೆ ಐಫೋನ್ ಸೇರಿದಂತೆ ಹಲವು ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ