image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಸ್‌ಸಿಎಸ್‌ ಆಸ್ಪತ್ರೆಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಎಸ್‌ಸಿಎಸ್‌ ಆಸ್ಪತ್ರೆಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಮಂಗಳೂರು: ಮಂಗಳೂರಿನ ಎಸ್‌ಸಿಎಸ್‌ ಆಸ್ಪತ್ರೆಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರಾದ ಡಾ. ಜೀವ ರಾಜ್ ಸೊರಕೆ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ಕ್ಲಿನಿಕಲ್ ಡೈರೆಕ್ಟರ್ ಮತ್ತು ಗ್ಯಾಸ್ಟ್ರೋ ಎಂಟ್ರೋಲಜಿ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ ಸೊರಕೆ ಅವರು, ರೋಗಿಗಳಿಗೆ ಸರಿಯಾದ ಔಷಧ ತಲುಪಿಸುವಲ್ಲಿ ಫಾರ್ಮಸಿಸ್ಟ್‌ಗಳ ಪಾತ್ರ ಪ್ರಮುಖವಾದದ್ದು ಎಂದು ವಿವರಿಸಿದರು. ವೈದ್ಯರ ಪ್ರಿಸ್ಕ್ರಿಪ್ಷನ್ ಅನ್ನು ಸೂಕ್ತವಾಗಿ ಪರಿಶೀಲಿಸುವ ಅಗತ್ಯವನ್ನು ಒತ್ತು ಹೇಳಿದ ಅವರು, ಆಡಳಿತ ಮಂಡಳಿಯ ಅನುಮತಿಯೊಂದಿಗೆ 'ಫಾರ್ಮಸಿ ಡಿಸ್ಕೌಂಟ್ ಕಾರ್ಡ್' ಮೂಲಕ ಅಪೇಕ್ಷಿತರಿಗೆ ರಿಯಾಯ್ತಿ ದರದಲ್ಲಿ ಔಷಧಿ ತಲುಪಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು.

ಸಮಾರಂಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ರಮಾ ಸೊರಕೆ, ವೈದ್ಯಕೀಯ ಅಧೀಕ್ಷಕಿ ಡಾ. ಶಾಲಿನಿ ರಾವ್, ನರ್ಸಿಂಗ್ ಅಧೀಕ್ಷಕಿ ಗ್ರೇಸಿ ಹಾಗೂ ಆಸ್ಪತ್ರೆಯ ವಿವಿಧ ವಿಭಾಗಗಳ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಹಿರಿಯ ಫಾರ್ಮಸಿಸ್ಟ್ ಎಲ್. ಎನ್. ಭಟ್ ಮಳಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಫಾರ್ಮಸಿ ತಂಡದವರು ಪ್ರಾರ್ಥನೆ, ಕಾರ್ಯಕ್ರಮ ನಿರೂಪಣೆ ಮತ್ತು ವಂದನಾರ್ಪಣೆ ನೆರವೇರಿಸಿದರು. ಹಿರಿಯ ಫಾರ್ಮಸಿಸ್ಟ್ ನಿತೀಶ್ ಕಾರ್ಯಕ್ರಮ ಸಂಯೋಜಿಸಿದ್ದು, ಆಡಳಿತ ಮಂಡಳಿಯು ಎಲ್ಲ ಫಾರ್ಮಸಿಸ್ಟ್‌ಗಳಿಗೆ ಶುಭ ಹಾರೈಸಿತು.

Category
ಕರಾವಳಿ ತರಂಗಿಣಿ