image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಳ್ವಾಸ್ ಸಹಕಾರ ಸಂಘದಿಂದ 4 ಡಯಾಲಿಸಿಸ್ ಯಂತ್ರಗಳ ಕೊಡುಗೆ

ಆಳ್ವಾಸ್ ಸಹಕಾರ ಸಂಘದಿಂದ 4 ಡಯಾಲಿಸಿಸ್ ಯಂತ್ರಗಳ ಕೊಡುಗೆ

ಮೂಡುಬಿದಿರೆ: ಕಳೆದ ಹತ್ತು ವರ್ಷಗಳಿಂದ ನಿರಂತರ ಲಾಭದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆಳ್ವಾಸ್ ಸಹಕಾರ ಸಂಘವು ತನ್ನ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ಗೆ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ದೀಪ ಬೆಳಗಿಸುವ ಮೂಲಕ ಹೊಸ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಘವು ತನ್ನ ಲಾಭಾಂಶದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ, ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ವಿನಿಯೋಗಿಸುತ್ತಿದೆ ಎಂದು ತಿಳಿಸಿದರು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ನಿಯಮಿತ ಚಿಕಿತ್ಸೆ ಅಗತ್ಯವಿದ್ದು, ಈ ಹೆಚ್ಚುವರಿ ನಾಲ್ಕು ಯಂತ್ರಗಳಿಂದ ಮೂಡುಬಿದಿರೆ ಹಾಗೂ ಸುತ್ತಮುತ್ತಲಿನ ಭಾಗದ ಜನರಿಗೆ ಸ್ಥಳೀಯವಾಗಿಯೇ ಸಮಯೋಚಿತ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಆಳ್ವಾಸ್ ಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ. ವಿನಯ್ ಆಳ್ವ, ಡಾ. ಹನಾ ಶೆಟ್ಟಿ, ಭಾರತ್ ಇನ್‌ಫ್ರಾಸ್ಟ್ರಕ್ಚರ್ ಆಡಳಿತ ನಿರ್ದೇಶಕ ಮೊಹಮದ್ ಮುಸ್ತಫಾ, ವೈದ್ಯರಾದ ಡಾ. ರೇವತಿ ಭಟ್, ಡಾ. ಸದಾನಂದ ನಾಯಕ್, ಡಾ. ಹರೀಶ್ ನಾಯಕ್, ಸಹಕಾರ ಸಂಘದ ನಿರ್ದೇಶಕರಾದ ನಾರಾಯಣ ಪಿ.ಎಂ., ಜಯರಾಂ ಕೋಟ್ಯಾನ್, ಪ್ರಕಾಶಿನಿ ಹೆಗ್ಡೆ, ಡಾ. ಕುರಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಪಿತ ಶೆಟ್ಟಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ