image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ, 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ, 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡಗಳು ಅಭೂತಪೂರ್ವ ಪ್ರದರ್ಶನ ನೀಡಿ ಎರಡೂ ವಿಭಾಗಗಳಲ್ಲೂ ಸಮಗ್ರ ಪ್ರಶಸ್ತಿಯನ್ನು (Overall Championship) ತಮ್ಮದಾಗಿಸಿಕೊಂಡಿವೆ. ಈ ಕೂಟದಲ್ಲಿ ಅತ್ಯುತ್ತಮ ಸಾಧನೆ ತೋರಿದ ಕಾಲೇಜಿನ 8 ಕ್ರೀಡಾಪಟುಗಳು ಮುಂಬರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಕ್ರೀಡಾಕೂಟದಲ್ಲಿ ಆಳ್ವಾಸ್ ತಂಡದ ಕ್ರೀಡಾಪಟುಗಳು ಪಾರಮ್ಯ ಮೆರೆದಿದ್ದು, ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗಗಳಲ್ಲೂ ತಲಾ 04 ಚಿನ್ನ ಹಾಗೂ 01 ಬೆಳ್ಳಿ ಪದಕಗಳನ್ನು ಒಳಗೊಂಡು ಒಟ್ಟು 10 ಪದಕಗಳನ್ನು ಬಾಚಿಕೊಂಡಿದ್ದಾರೆ. ಬಾಲಕರ ವಿಭಾಗದ ಸ್ಪರ್ಧೆಯಲ್ಲಿ ಪ್ರಫುಲ್ (71 ಕೆಜಿ), ಪ್ರಜ್ವಲ್ (79 ಕೆಜಿ), ಶ್ರೇಯಸ್ (88 ಕೆಜಿ) ಹಾಗೂ ಜೇಷ್ಠ (110 ಕೆಜಿ) ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರೆ, ಸಂತೋಷ್ (60 ಕೆಜಿ) ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದುಕೊಂಡರು.

ಅಂತೆಯೇ ಬಾಲಕಿಯರ ವಿಭಾಗದಲ್ಲಿ ಸೌಮ್ಯ (53 ಕೆಜಿ), ಮೈತ್ರಿ (58 ಕೆಜಿ), ಅಪೂರ್ವ (63 ಕೆಜಿ) ಹಾಗೂ ಅಶ್ವಿನಿ (86 ಕೆಜಿ) ಪ್ರಥಮ ಸ್ಥಾನದೊಂದಿಗೆ ಸ್ವರ್ಣ ಪದಕ ಮುಡಿಗೇರಿಸಿಕೊಂಡರೆ, ಸಂಜನಾ (48 ಕೆಜಿ) ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕಕ್ಕೆ ಪಾತ್ರರಾದರು. ಚಿನ್ನದ ಪದಕ ವಿಜೇತ ಈ ಎಂಟು ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯಮಟ್ಟದಲ್ಲಿ ಅದ್ಭುತ ಸಾಧನೆಗೈದು ಕಾಲೇಜಿಗೂ ಹಾಗೂ ಜಿಲ್ಲೆಗೂ ಕೀರ್ತಿ ತಂದ ವಿಜೇತ ಕ್ರೀಡಾಪಟುಗಳನ್ನು ಮತ್ತು ತರಬೇತುದಾರರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಮುಕ್ತಕಂಠದಿಂದ ಅಭಿನಂದಿಸಿ, ರಾಷ್ಟ್ರಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Category
ಕರಾವಳಿ ತರಂಗಿಣಿ