image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕ್ಯಾಬಿನೆಟ್ ನಿರ್ಣಯಗಳ ತ್ವರಿತ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಕ: ಸಚಿವ ಯು.ಟಿ. ಖಾದರ್

ಕ್ಯಾಬಿನೆಟ್ ನಿರ್ಣಯಗಳ ತ್ವರಿತ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಕ: ಸಚಿವ ಯು.ಟಿ. ಖಾದರ್

ಮಂಗಳೂರು : ಮಂಗಳೂರಿನಲ್ಲಿ ಸೆಪ್ಟೆಂಬರ್ 18 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳನ್ನು ತ್ವರಿತವಾಗಿ ಜಾರಿಗೆ ತರಲು ಪ್ರತಿಯೊಂದು ಇಲಾಖೆಯಲ್ಲೂ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಸಂಪುಟ ನಿರ್ಧಾರಗಳು ಶೀಘ್ರವಾಗಿ ಸರ್ಕಾರದ ಆದೇಶವಾಗಿ ಹೊರಬರಲು ಇಲಾಖೆಗಳು ಸಚಿವಾಲಯದೊಂದಿಗೆ ನಿರಂತರ ಸಮನ್ವಯ ಕಾಯ್ದುಕೊಳ್ಳಬೇಕು ಎಂದರು.

ಸರ್ಕಾರದ ಆದೇಶ ಬಂದ ತಕ್ಷಣವೇ ಕ್ರಿಯಾಯೋಜನೆ ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಬೇಕು ಹಾಗೂ ಯೋಜನೆಗಳ ಬಗ್ಗೆ ಅಧಿಕಾರಿಗಳು ಸ್ಪಷ್ಟ ಮಾಹಿತಿ ಹೊಂದಿರಬೇಕು. ಸದ್ಯದಲ್ಲೇ ಮುಖ್ಯಮಂತ್ರಿಗಳು ಕಾಮಗಾರಿಗಳ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಕುದ್ರು ದ್ವೀಪಗಳ ಅಭಿವೃದ್ಧಿ ಪಿಪಿಪಿ ಮಾದರಿಯಲ್ಲಿ ನಡೆಯಲಿದ್ದು, ಸಿ.ಆರ್.ಜೆಡ್ ಅನುಮೋದನೆ ಪಡೆದು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಇದೇ ವೇಳೆ ಏರ್‌ಪೋರ್ಟ್ ರಸ್ತೆಯ ಮರವೂರು ಹೊಸ ಸೇತುವೆ ಹಾಗೂ ಎಕ್ಕೂರು ಅತ್ಯಾಧುನಿಕ ಮೀನು ಮಾರುಕಟ್ಟೆ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಡಿಪಿಆರ್ ಸಿದ್ಧಪಡಿಸಲು ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದರು. ಬಾಳೆಪುಣಿಯಲ್ಲಿ ನಿರ್ಮಾಣವಾಗುತ್ತಿರುವ ಜೈಲುವರೆಗೋಡೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದು, ಮಂಗಳ ಕ್ರೀಡಾಂಗಣವನ್ನು ಅತ್ಯಾಧುನಿಕ ಗೊಳಿಸುವುದು ಹಾಗೂ ಉಳ್ಳಾಲ ಕೋಟೆಪುರ ಹೊಸ ಸೇತುವೆ ಮತ್ತು ಜೆಟ್ಟಿ ಕಾಮಗಾರಿಯನ್ನು ಸಮನ್ವಯದಿಂದ ನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ