image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ: ಶಿಬಿರಾರ್ಥಿಗಳಿಗೆ ತರಬೇತಿ

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ: ಶಿಬಿರಾರ್ಥಿಗಳಿಗೆ ತರಬೇತಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನೆಯ ಸ್ವರ, ಲಯ, ತಾಳ ಹಾಗೂ ಗಾಯನ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿ, ಪ್ರಾಯೋಗಿಕ ತರಬೇತಿಯನ್ನು ನಡೆಸಿಕೊಟ್ಟರು. ಇದೇ ವೇಳೆ ಭಜನಾ ಕಮ್ಮಟದ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಕಾರ್ಯದರ್ಶಿ ಶ್ರೀ ವೀರು ಶೆಟ್ಟಿ ಅವರು ಶಿಬಿರಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಚಯವನ್ನು ಮಾಡಿಕೊಟ್ಟರು.

ಸಂಜೆ ಕಾರ್ಕಳದ ಸಾಲ್ಮರ ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಡಿ. ಹರ್ಷೇಂದ್ರ ಕುಮಾರ್ ಹಾಗೂ ಶ್ರೀಮತಿ ಐಶ್ವರ್ಯ ನಿಶ್ಚಲ್ ಅವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ